Earthaquake: ಮಹಾರಾಷ್ಟ್ರ ಮತ್ತು ಗುಜರಾತ್ ನಡುವೆ ಭೂಕಂಪ
ಜನವರಿ 5 ರಂದು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಬಳಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಮಹಾರಾಷ್ಟ್ರ ಮತ್ತು ಗುಜರಾತ್‌ನ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವವಾಯಿತು.
ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಶುಕ್ರವಾರ ರಾತ್ರಿ 9:52 ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. 10 ಕಿಲೋ ಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.

ಹಿಂದಿನ ದಿನ, ರಿಕ್ಟರ್ ಮಾಪಕದಲ್ಲಿ 3.5 ರ ತೀವ್ರತೆಯ ಭೂಕಂಪವು ಮಣಿಪುರದ ಲುಂಗ್ಲೇಗೆ ಅಪ್ಪಳಿಸಿತು ಎಂದು ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (NCS) ತಿಳಿಸಿದೆ. ಶುಕ್ರವಾರ ಬೆಳಗ್ಗೆ 7:18ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.












Click it and Unblock the Notifications