ಪಂಜಾಬ್ : ಆರ್‌ಎಸ್‌ಎಸ್‌ ಕಚೇರಿ ಮೇಲೆ ಗುಂಡಿನ ದಾಳಿ

Posted By:
Subscribe to Oneindia Kannada

ಚಂಡೀಗಢ, ಜನವರಿ 18 : ಪಂಜಾಬಿನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಒಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಲೂಧಿಯಾನದ ಕಿದ್ವಾಯಿ ನಗರದ ಸಮೀಪದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಸೋಮವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಚೇರಿ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. [ಹೊಸ ವರ್ಷಾರಂಭದಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಆರ್ ಎಸ್ ಎಸ್]

rss

ಗುಂಡಿನ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಲೂಧಿಯಾನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಆರಂಭಿಸಿದ್ದಾರೆ. ['ಅಖಂಡ ಭಾರತ' ನಂತರ ರಾಮ್ ಮಾಧವ್ ಹೊಸ ಕನಸೇನು?']

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Miscreants allegedly opened fire at RSS office near Kidwayi Nagar in Ludhiana on Monday morning. One person injured and admitted to hospital. Police visited the spot.
Please Wait while comments are loading...