ಮಿಜೋರಾಂ ವಿಧಾನಸಭೆ ಚುನಾವಣೆ 2023: ನಾಳೆ ಮತದಾನಕ್ಕೆ ಸಕಲ ಸಿದ್ಧತೆ, ಎಂಎನ್‌ಎಫ್-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ
ವಿಧಾನಸಭೆ ಚುನಾವಣೆಗೆ ಮಿಜೋರಾಂ ಸಿದ್ಧವಾಗಿದ್ದು ಮಂಗಳವಾರ (ನವೆಂಬರ್ 7) ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಒಟ್ಟು 40 ವಿಧಾನಸಭಾ ಸ್ಥಾನಗಳಿಗೆ ಮತದಾನದ ಸಿದ್ಧತೆ ಪೂರ್ಣಗೊಂಡಿದೆ. ಮತದಾನ ಮತ್ತು ಭದ್ರತಾ ಸಿಬ್ಬಂದಿ ಸೋಮವಾರ ಮುಂಜಾನೆ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿದ್ದಾರೆ.
ರಾಜ್ಯದ ಒಟ್ಟು 857,063 ಮತದಾರರು (413,062 ಪುರುಷರು, 439,026 ಮಹಿಳೆಯರು ಮತ್ತು 4975 ಸೇವಾ ಮತದಾರರು) ಬಿಗಿ ಭದ್ರತೆಯ ನಡುವೆ 174 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮಿಜೋರಾಂನ ಎಲ್ಲಾ 1276 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಲಿದ್ದು, ಸಂಜೆ 4 ರವರೆಗೆ ನಡೆಯಲಿದೆ.

ನವೆಂಬರ್ 7ರ ನಂತರ ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. ಒಟ್ಟು 149 ಮತಗಟ್ಟೆಗಳಾಗಿದ್ದು, ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಗಡಿಗಳ ಸಮೀಪವಿರುವ ಸುಮಾರು 30 ಮತಗಟ್ಟೆಗಳನ್ನು ಸೂಕ್ಷ್ಮವೆಂದು ಘೋಷಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಮಧುಪ್ ವ್ಯಾಸ್ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಸುಮಾರು 6000 ಚುನಾವಣಾ ಸಿಬ್ಬಂದಿ, 3000 ಪೊಲೀಸರು ಮತ್ತು 50 ಕಂಪನಿಗಳ ಸಿಎಪಿಎಫ್ (ಕೇಂದ್ರ ಸಶಸ್ತ್ರ ಪೊಲೀಸ್ ಪಡೆ) ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮಿಜೋರಾಂ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ಒಟ್ಟು 1276 ಇವಿಎಂಗಳು ಮತ್ತು ವಿವಿಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಮತ್ತು 20% ಮೀಸಲು ಸ್ಟ್ಯಾಂಡ್‌ಬೈನಲ್ಲಿ ಇರುತ್ತವೆ.
ಸುಮಾರು 10 ಸಾವಿರ ಮತದಾರರು ನಿಗದಿತ ದಿನಾಂಕಕ್ಕಿಂತ ಮೊದಲೇ ಮತದಾನ ಮಾಡಿದ್ದಾರೆ. ಇವರಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಅಥವಾ ಅಂಗವಿಕಲ ವ್ಯಕ್ತಿಗಳು ಮತ್ತು ಸೇವಾ ಮತದಾರರು, ಅಂಚೆ ಮತಪತ್ರಗಳನ್ನು ಚಲಾಯಿಸುವ ಮತಗಟ್ಟೆ ಸಿಬ್ಬಂದಿ ಸೇರಿದ್ದಾರೆ. ಮಿಜೋರಾಂನಲ್ಲಿ ಶಾಂತಿಯುತ ಮತದಾನಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 2018 ರಲ್ಲಿ 81.31% ರಷ್ಟು ಮತದಾನವಾಗಿತ್ತು.

ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಮತ್ತು ಕಾಂಗ್ರೆಸ್ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿವೆ. ಎರಡು ಪ್ರಾದೇಶಿಕ ಪಕ್ಷಗಳಾದ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ ಮತ್ತು ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಮತ್ತು ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕಠಿಣ ಹೋರಾಟ ನಡೆಯಲಿದೆ.
2018 ರಲ್ಲಿ MNF 10 ವರ್ಷಗಳ ನಂತರ ಮಿಜೋರಾಂನಲ್ಲಿ ಅಧಿಕಾರಕ್ಕೆ ಮರಳಿತು. ಈಶಾನ್ಯದಲ್ಲಿ ತನ್ನ ಭದ್ರಕೋಟೆಯಲ್ಲಿ ಹೊಂದಿದ್ದ ಕಾಂಗ್ರೆಸ್ ಅನ್ನು ಸೋಲಿಸಿತು. MNF 40 ರಲ್ಲಿ 26 ಸ್ಥಾನಗಳನ್ನು ಪಡೆದುಕೊಂಡಿತು ಮತ್ತು 37.70% ಮತ ಹಂಚಿಕೆಯೊಂದಿಗೆ ತನ್ನದೇ ಆದ ಬಹುಮತವನ್ನು ಗಳಿಸಿತು.
2008 ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಕೇವಲ ಐದು ಸ್ಥಾನಗಳನ್ನು ಮತ್ತು 30% ಮತಗಳನ್ನು ಗಳಿಸಿ ಮೂರನೇ ಸ್ಥಾನ ಗಳಿಸಿತು. 2008 ರಲ್ಲಿ ಕಾಂಗ್ರೆಸ್ 32 ಸ್ಥಾನಗಳನ್ನು ಗೆದ್ದುಕೊಂಡಿತ್ತು, 1998 ರಿಂದ ಅಧಿಕಾರದಲ್ಲಿದ್ದ MNF ಅನ್ನು ಸೋಲಿಸಿತ್ತು. ಐದು ವರ್ಷಗಳ ನಂತರ ಕಾಂಗ್ರೆಸ್ 34 ಸ್ಥಾನಗಳನ್ನು ಗೆದ್ದಿತು, ಆದರೆ MNF ಕೇವಲ ಐದು ಸ್ಥಾನಗಳನ್ನು ಗಳಿಸಿತು.
ಸದ್ಯ ಎಂಎನ್‌ಎಫ್, ಕಾಂಗ್ರೆಸ್ ಮತ್ತು ಜಿಪಿಎಂ ಎಲ್ಲ 40 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ 23 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ











Click it and Unblock the Notifications