Mizoram Election Exit Polls 2023: ಮಿಜೋರಾಂನಲ್ಲಿ ಅತಂತ್ರ ಫಲಿತಾಂಶ; ಕಾಂಗ್ರೆಸ್ ಕಿಂಗ್ ಮೇಕರ್!
ಪಂಚರಾಜ್ಯಗಳ ವಿಧಾನಸಭಾ ಚುನವಾಣೆಯ ಮತದಾನೋತ್ತರ ಸಮೀಕ್ಷೆ ಬಹಿರಂಗವಾಗಿದ್ದು, ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಈ ಬಾರಿ ಅತಂತ್ರ ಫಲಿತಾಂಶ ಬರಲಿದೆ. ಮಿಜೋರಾಂನಲ್ಲಿ ಈ ಬಾರಿ ಒಂದು ಪಕ್ಷ ಅಧಿಕಾರ ಹಿಡಿಯುವುದು ಅನುಮಾನ ಎನ್ನಲಾಗಿದೆ.
40 ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) 10-14 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಝೋರಾಮ್ ಪೀಪಲ್ಸ್ ಮೂವ್‌ಮೆಂಟ್ (ZPM) 15-25 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಕಾಂಗ್ರೆಸ್ ಇಲ್ಲಿ 5-9 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಬಿಜೆಪಿ 0-2 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ. ಸರ್ಕಾರ ರಚನೆಗೆ 21 ಸ್ಥಾನಗಳಲ್ಲಿ ಗೆಲ್ಲಬೇಕಿದ್ದು, ಕಾಂಗ್ರೆಸ್ ಇಲ್ಲಿ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ.
ಝೋರಾಮ್ ಪೀಪಲ್ಸ್ ಮೂವ್‌ಮೆಂಟ್ ಒಂದು ಹೆಚ್ಚಿನ ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡುವ ಅವಕಾಶ ಇದೆ.
40 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 174 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಕಳೆದ ಚುನಾವಣೆಯಲ್ಲಿ 26 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿತ್ತು. ಝೋರಮ್‌ತಂಗಾ ಸದ್ಯ ಮಿಜೋರಾಂನ ಸಿಎಂ ಆಗಿದ್ದಾರೆ.
ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF) ಅಧಿಕಾರವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದರೆ, ಝೋರಾಮ್ ಪೀಪಲ್ಸ್ ಮೂವ್‌ಮೆಂಟ್ (ZPM), ಬಿಜೆಪಿ ಮತ್ತು ಕಾಂಗ್ರೆಸ್ ಅಧಿಕಾರದಲ್ಲಿರುವ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತವೆ.

ಮಿಜೋರಾಂನಲ್ಲಿ ನವೆಂಬರ್ 7 ರಂದು ಚುನಾವಣೆ ನಡೆದಿದ್ದು, ಮಿಜೋರಾಂನಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರು ಹೆಚ್ಚಿನ ಮತದಾನ ಮಾಡಿದ್ದಾರೆ. ಮಿಜೋರಾಂನ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಪ್ರಕಾರ, 81.25% ಮಹಿಳಾ ಮತದಾರರು ಮತ ಹಾಕಿದ್ದು, ಪುರುಷ ಮತದಾರರು 80.04% ರಷ್ಟು ಮತ ಹಾಕಿದ್ದಾರೆ.
2018ರಲ್ಲಿ ಮಿಜೋರಾಂನಲ್ಲಿ ಎಂಎನ್‌ಎಫ್ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 5 ರಲ್ಲಿ ಗೆದ್ದಿದ್ದರೆ, ಬಿಜೆಪಿ 1 ಸ್ಥಾನ ಮತ್ತು ಇತರರು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. 2008 ಮತ್ತು 2013ರಲ್ಲಿ ಇಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು.












Click it and Unblock the Notifications