
Breaking: ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್!
ಚೆನ್ನೈ, ಡಿಸೆಂಬರ್ 03: ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವ ಮಂದಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ.
ಕುಡಿದು ಜನರ ಮೇಲೆ ವಾಹನ ಚಲಾಯಿಸಿದ ವ್ಯಕ್ತಿಗೆ ಮದ್ರಾಸ್ ಹೈಕೋರ್ಟ್ ವಿಭಿನ್ನ ಶಿಕ್ಷೆ
ದೇವಸ್ಥಾನಗಳಿಗೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಮೊಬೈಲ್ ಫೋನ್ ಅನ್ನು ಇರಿಸುವುದಕ್ಕಾಗಿಯೇ ವಿಶೇಷವಾಗಿ ಫೋನ್ ಠೇವಣಿಯ ಲಾಕರ್ ಅನ್ನು ಸ್ಥಾಪಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ತಮಿಳುನಾಡಿನ ದೇಗುಲಗಳಲ್ಲಿ ಫೋನ್ ಲಾಕರ್:
ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್‌ಗಳನ್ನು ಸ್ಥಾಪಿಸಬೇಕು. ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಮದ್ರಾಸ್ ಉಚ್ಛ ನ್ಯಾಯಾಲಯ ಹೇಳಿದೆ.