• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ದೇಹ ಪತ್ತೆ: ಪೊಲೀಸರು

|
Google Oneindia Kannada News

ಮುಂಬೈ ಸೆಪ್ಟೆಂಬರ್ 30: ಮುಂಬೈನ ಅಂಧೇರಿ ಪ್ರದೇಶದಲ್ಲಿ ಗುರುವಾರ ಹೋಟೆಲ್ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಮಾಡೆಲ್ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಮಾಡೆಲ್ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೊಟೇಲ್‌ನಲ್ಲಿ ರಾತ್ರಿಯ ಊಟಕ್ಕೂ ಆರ್ಡರ್ ಮಾಡಿದ್ದರು.

ಗುರುವಾರ ಮನೆಗೆಲಸದ ಸಿಬ್ಬಂದಿ ಪದೇ ಪದೇ ಕರೆ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೋಟೆಲ್ ತಲುಪಿದಾಗ ಪೊಲೀಸರು ಮಾಸ್ಟರ್ ಕೀಯೊಂದಿಗೆ ಕೊಠಡಿಯನ್ನು ತೆರೆದಾಗ ಮಾಡೆಲ್ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆ ನಡೆದ ಸ್ಥಳದಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆತ್ಮಹತ್ಯಾ ಪತ್ರದಲ್ಲಿ ಮಾಡೆಲ್, "ನನ್ನನ್ನು ಕ್ಷಮಿಸಿ, ಇದಕ್ಕೆ ಯಾರೂ ಕಾರಣರಲ್ಲ, ನಾನು ಸಂತೋಷವಾಗಿಲ್ಲ, ನನಗೆ ಶಾಂತಿ ಬೇಕು" ಎಂದು ಬರೆದಿದ್ದಾರೆ. ವರ್ಸೋವಾ ಪೊಲೀಸರು ಎಡಿಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ SAHAIHELPLINE@GMAIL.COM

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
A 40-year-old model's body was found hanging from a fan in a hotel room in Mumbai's Andheri area on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X