ಮೋದಿ ಸಂಪುಟದಲ್ಲಿ ಪ್ರಭಾವಿ ಖಾತೆ ಪಡೆದ ಹೆಚ್ ಡಿ ಕುಮಾರಸ್ವಾಮಿ
ನವದೆಹಲಿ, ಜೂನ್ 10: ನರೇಂದ್ರ ಮೋದಿ ಭಾನುವಾರ ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನರೇಂದ್ರ ಮೋದಿ ಅವರ ಜೊತೆಗೆ 71 ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಿದ್ದು, ಹಲವು ಮಿತ್ರ ಪಕ್ಷಗಳು ಮೋದಿ ಸಂಪುಟದಲ್ಲಿ ಪ್ರಭಾವಿ ಖಾತೆಗಳ ಮೇಲೆ ಕಣ್ಣೀಟ್ಟಿದ್ದಾರೆ.
ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ @narendramodi ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 10, 2024
I am deeply grateful to the Hon'ble Prime…
ಹೌದು, ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಯಾಗಿದ್ದು, ಟಿಡಿಪಿ ಹಾಗೂ ಜೆಡಿಯು ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಪ್ರಭಾವಿ ಖಾತೆಗಳ ಕುರಿತು ಬೇಡಿಕೆ ಇಟ್ಟಿದ್ರು, ಅಲ್ಲದೇ ಬಿಜೆಪಿಯೂ ಪ್ರಮುಖ ಖಾತೆಗಳನ್ನ ತಮ್ಮ ಬಳಿಯೇ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಲೆಕ್ಕಾಚಾರವನ್ನ ಹಾಕಿಕೊಂಡಿದ್ದು, ಪ್ರಭಾವಿ ಖಾತೆಗಳನ್ನ ತಮ್ಮ ಬಳಿಯೇ ಇಟ್ಟುಕೊಂಡಿದೆ. ಇನ್ನೂ ಕರ್ನಾಟಕದ ಐವರು ಮೋದಿ ಸಂಪುಟದಲ್ಲಿ ಮಂತ್ರಿ ಪಟ್ಟವನ್ನ ಅಲಂಕರಿಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪ್ರಮುಖ ಖಾತೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಕೃಷಿ ಖಾತೆ ಸಿಗಲಿದೆ ಎಂದು ಹೇಳಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನ ನೀಡಲಾಗಿದೆ.
ಇನ್ನೂ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿ ಪಟ್ಟ ಪಡೆದ ಕುಮಾರಸ್ವಾಮಿ ಅವರು ಸಂತಸವನ್ನ ವ್ಯಕ್ತಪಡಿಸಿದ್ದು, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.












Click it and Unblock the Notifications