ಮೋದಿ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು!: ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಭವಿಷ್ಯ

ನವದೆಹಲಿ, ಜೂನ್. 15: ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

"ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Modi 3 O Government may fall anytime Congress chief Mallikarjun Kharge

ಖಿಚಡಿ ಸರ್ಕಾರ ಉಳಿಯುವುದಿಲ್ಲ!

ಮುಂದುವರಿದು ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, "ಅವರು (ಪ್ರಧಾನಿ ನರೇಂದ್ರ ಮೋದಿ) ಸ್ವತಃ ಹಲವಾರು ಬಾರಿ ಹೇಳಿದ್ದರು...'ಖಿಚಡಿ ಸರ್ಕಾರ'... ಬಹುಮತ ಇಲ್ಲದಿದ್ದರೆ ಅದು ಯಾವಾಗ ಬೇಕಾದರೂ ಬೀಳಬಹುದು. ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಇದು ಅವರೇ ಹೇಳಿದ ಮಾತುಗಳು. ನಾನು ಅದೇ ವಿಷಯವನ್ನು ಮತ್ತೆ ನಿಮ್ಮ ಮುಂದೆ ಹೇಳುತ್ತಿದ್ದೇನೆ" ಎಂದು ಹೇಳಿದ್ದಾರೆ.

ಇನ್ನು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಕಾಂಗ್ರೆಸ್ ಮುಖ್ಯಸ್ಥರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಮತ್ತು ಅವಿಶ್ವಾಸದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

Modi 3 O Government may fall anytime Congress chief Mallikarjun Kharge

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, 2014 ರಿಂದ ಬಹುಮತದೊಂದಿಗೆ ಎನ್‌ಡಿಎ ಸರ್ಕಾರ ರಚನೆಯಾಗಿದೆ ಎಂದು ಹೇಳಿದ್ದಾರೆ. "ಇಂಡಿಯಾ ಮೈತ್ರಿಕೂಟವು ಯಾವುದೇ ನಾಯಕ ಅಥವಾ ನೀತಿಯಿಲ್ಲದ ವಿರೋಧ ಪಕ್ಷಗಳ ಮೈತ್ರಿಯಾಗಿತ್ತು. ದೆಹಲಿಯಲ್ಲಿ ಅವರು ಮೈತ್ರಿಯಲ್ಲಿ ಚುನಾವಣೆಗಳನ್ನು ಎದುರಿಸಿದರು. ಆದರೆ ಪಂಜಾಬ್‌ನಲ್ಲಿ ಅವರು ಏಕಾಂಗಿಯಾಗಿ ಹೋರಾಡಿದರು. ಈ ಸಂದರ್ಭಗಳು ಜನರ ಮನಸ್ಸಿನಲ್ಲಿ ಗೊಂದಲವನ್ನು ಉಂಟುಮಾಡಿವೆ. ಅದಕ್ಕೆ ಚುನಾವಣೆ ಉತ್ತರ ನೀಡಿದೆ" ಎಂದಿದ್ದಾರೆ.

"ಎನ್‌ಡಿಎಗೆ ಸ್ಪಷ್ಟ ಬಹುಮತವಿದೆ. ನಾವು 292 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷದ ಪಾತ್ರವನ್ನು ನಿರ್ವಹಿಸುವಂತೆ ನಾನು ಸಲಹೆ ನೀಡುತ್ತೇನೆ" ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತಿಪಕ್ಷದ ಇಂಡಿಯಾ ಬ್ಲಾಕ್ 233 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷ 99 ಸ್ಥಾನಗಳನ್ನು ಗೆದ್ದಿದೆ. ಮಿತ್ರಪಕ್ಷಗಳ ಬೆಂಬಲವಿಲ್ಲದೆ ಸರ್ಕಾರ ರಚಿಸಬೇಕು ಎನ್ನುವ ಬಿಜೆಪಿ ಕನಸು ಒಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+