18 ದಿನಗಳ ನಂತರ ಸದನಕ್ಕೆ ಬಂದ ಅಮಿತ್ ಶಾ: ಚರ್ಚೆಗೆ ಅವಕಾಶ ನೀಡದ ವಿಪಕ್ಷಗಳು, ಅನಿರ್ದಿಷ್ಟಾವಧಿಗೆ ಮುಂದೂಡಿಕೆ!
ಈ ಬಾರಿಯ ಲೋಕಸಭೆಯ ಮುಂಗಾರು ಅಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂದಾಗಿದ್ದರು. ಅಲ್ಲದೆ ಮುಂಗಾರು ಅಧಿವೇಶನದ ಕೊನೆಯ ದಿನ ಸದನಕ್ಕೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದರು. ಆದರೆ ಗದ್ದಲದ ವಾತಾವರಣ ನಿರ್ಮಾಣವಾಗಿದ್ದರಿಂದ ಲೋಕಸಭೆಯ ಮುಂಗಾರು ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 13ರ ಗುರುವಾರ ವಂದೇ ಮಾತರಂ ಗೀತೆಯೊಂದಿಗೆ ಅನಿರ್ದಿಷ್ಟಾವಧಿ ಮುಂದೂಡಲಾಗಿದೆ. ಈ ಬಾರಿಯ ಅಧಿವೇಶನದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವಿಚಾರಕ್ಕೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು. 18 ದಿನಗಳ ಮಳೆಗಾಲದ ಅಧಿವೇಶನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಮೊದಲ ಬಾರಿಗೆ ಲೋಕಸಭೆಗೆ ಬಂದಿದ್ದರು. ಆದರೆ ಕಲಾಪ ಪ್ರಾರಂಭವಾದ ನಾಲ್ಕು ನಿಮಿಷಗಳಲ್ಲಿಯೇ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ದೆಹಲಿಯಲ್ಲಿ ನೀಟ್ ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಬಲವಂತದ ಪ್ರಯೋಗ ನಡೆಸಿದ್ದಾರೆ ಇದಕ್ಕೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಗ್ರಹಿಸಿದ್ದರು. ಮುಂಗಾರು ಅಧಿವೇಶನದ ಕೊನೆಯ ದಿನವಾದ ಗುರುವಾರ ಅಮಿತ್ ಶಾ ಅವರು ಉತ್ತರ ನೀಡುವುದಾಗಿ ಹೇಳಿದ್ದರು. ಹೀಗಾಗಿ, ಇಂದು ಚರ್ಚೆ ನಡೆಯಲಿದೆ ಎಂದೇ ನಿರೀಕ್ಷೆ ಮಾಡಲಾಗಿತ್ತು. ಈ ಬಾರಿ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದಲೂ ಸದನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಆಗಮಿಸಿರಲಿಲ್ಲ. ಈ ವಿಷಯಕ್ಕೆ ವಿರೋಧ ಪಕ್ಷಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದವು, ಅಲ್ಲದೆ ಪ್ರತಿಭಟನೆಯನ್ನು ಸಹ ನಡೆಸಿದ್ದವು. ಆದರೆ, ಕೊನೆಯ ದಿನ ಅಧಿವೇಶನದಲ್ಲಿ ಚರ್ಚೆಗೆ ಅವಕಾಶವೇ ಸಿಗಲಿಲ್ಲ.

ಸದನದಲ್ಲಿ ಗುರುವಾರ ಆಗಿದ್ದೇನು ?
ಮುಂಗಾರು ಅಧಿವೇಶನದ ಕೊನೆಯ ದಿನವಾದ ಗುರುವಾರ ಸದನದಲ್ಲಿ ಗಂಭೀರ ಚರ್ಚೆ ನಡೆಯಲಿದೆ ಎಂದೇ ನಿರೀಕ್ಷೆ ಮಾಡಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಸ್ಪೀಕರ್ ಬರುವ ಮೊದಲೇ ವಿರೋಧ ಪಕ್ಷದ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು. ವಂದೇ ಮಾತರಂ ಮುಕ್ತಾಯವಾದ ಮೇಲೆ ಮತ್ತೆ ವಿರೋಧ ಪಕ್ಷಗಳ ಸದಸ್ಯರು ಗದ್ದಲವೆಬ್ಬಿಸಿದರು. ಗದ್ದಲ ಕಡಿಮೆಯಾಗದ ಹಿನ್ನೆಲೆಯಲ್ಲಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಸ್ಪೀಕರ್ ಓಂ ಬಿರ್ಲಾ ಅವರು ತಿಳಿಸಿದರು. ಈ ಮೂಲಕ ಈ ಬಾರಿಯ ಮುಂಗಾರು ಅಧಿವೇಶನವು ಚರ್ಚೆಯೇ ಆಗದೆ ಮುಕ್ತಾಯವಾಯಿತು.
ಸದನ ಪ್ರಾರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗಿದರು, ಜುಲೈ 20 ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮದ ಬಗ್ಗೆ ಶಾ ಸದನಕ್ಕೆ ಬಂದು ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ವಿಷಯಗಳ ಕುರಿತು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗದ ಆರೋಪದ ಕುರಿತು ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ವಿರೋಧ ಪಕ್ಷ ಒತ್ತಾಯಿಸಿದ್ದವು. ಪ್ರಧಾನಿ ನರೇಂದ್ರ ಮೋದಿ ಅವರ ಕ್ಷಮೆಯಾಚನೆ ಮಾಡಬೇಕು ಎಂದೂ ಆಗ್ರಹಿಸಲಾಗಿತ್ತು.
ಅಮಿತ್ ಶಾ ಹೇಳಿದ್ದೇನು ?
ಇನ್ನು ಸದನ ಕಾರ್ಯನಿರ್ವಹಿಸಲು ಅವಕಾಶ ನೀಡಿದರೆ ವಿರೋಧ ಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದರು. ಆದರೆ, ಅಮಿತ್ ಶಾ ಅವರ ಉಪನ್ಯಾಸ ನಮಗೆ ಬೇಡ ಅವರು ರಾಜೀನಾಮೆ ಕೊಡಲಿ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.


Click it and Unblock the Notifications
