ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ಪ್ರಮಾಣ ವಚನಕ್ಕೆ ಮೋದಿ, ಶಾ

ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್ 18 ರಂದು ಡೆಹ್ರಾಡೂನ್‍ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

|
Google Oneindia Kannada News

ಉತ್ತರಾಖಂಡ್, ಮಾರ್ಚ್. 17 : ಆರ್‍ ಎಸ್ ಎಸ್ ಮಾಜಿ ಪ್ರಚಾರಕ್ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮಾರ್ಚ್ 18 ರಂದು ಶನಿವಾರ ತ್ರಿವೇಂದ್ರ ಸಿಂಗ್ ರಾವತ್ ಅವರು ಡೆಹ್ರಾಡೂನ್‍ ನಲ್ಲಿ ಮದ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.[ಉತ್ತರಾಖಂಡ್ ನಲ್ಲಿ ಬಿಜೆಪಿಗೆ ಐತಿಹಾಸಿಕ ಜಯ]

ಈ ಸಮಾರಂಭಕ್ಕೆ ಪದಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಪಕ್ಷದ ವಿವಿಧ ನಾಯಕರು ಭಾಗವಹಿಸಲಿದ್ದಾರೆ ಎಂದು ಉತ್ತರಾಖಂಡ್ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿರುವ ಶ್ಯಾಮ್ ಜಾಜು ತಿಳಿಸಿದ್ದಾರೆ.

ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಶಾಸಕರ ಸಹ ಮತದಿಂದ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ,ಸರೋಜ್ ಪಾಂಡೆ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡ್ ರಾಜ್ಯದ ಉಸ್ತುವಾರಿ ವಹಿಸಿರುವ ಶ್ಯಾಮ್ ಜಾಜು ಭಾಗವಹಿಸಿದ್ದರು.

English summary
PM Narendra Modi and BJP president Amit Shah will attend Trivendra Singh Rawat swearing-in ceremony on March 18, said BJP Uttarakhand state in-charge Shyam Jaju.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X