ಲಂಕನ್ನರೇ ಹೆದರಬೇಡಿ ನಿಮ್ಮೊಂದಿಗೆ ಭಾರತವಿದೆ: ಮೋದಿ
ಶ್ರೀಲಂಕಾದಲ್ಲಿ ಭಾರಿ ಮಳೆ, ಭೂಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಪ್ರವಾಹದಲ್ಲಿ 500ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿವೆ, 60 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ
ನವದೆಹಲಿ, ಮೇ 27: ಶ್ರೀಲಂಕಾದಲ್ಲಿ ಭಾರಿ ಮಳೆ, ಭೂಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಪ್ರವಾಹದಲ್ಲಿ 500ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿವೆ, 60 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತಂಕದಲ್ಲಿರುವ ಲಂಕನ್ನರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಹಾಯಹಸ್ತ ಚಾಚಿ, ಅಭಯ ನೀಡಿದ್ದಾರೆ.
ಶ್ರೀಲಂಕಾ ವಿಪತ್ತು ನಿರ್ವಹಣಾ ಪಡೆ ಸತತ ಪರಿಶ್ರಮ ವಹಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಸಿದೆ.

ನೈಸರ್ಗಿಕ ವಿಕೋಪಕ್ಕೆ ಸಿಲುಕಿ ಆಪಾರ ಪ್ರಮಾಣದ ಆಸ್ತಿ ಹಾಗೂ ಜೀವ ಹಾನಿ ಕಂಡಿರುವ ದ್ವೀಪ ರಾಷ್ಟ್ರ ಶ್ರೀಲಂಕಾದ ಪರಿಸ್ಥಿತಿಗೆ ಪ್ರಧಾನಿ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
We stand with our Sri Lankan brothers and sisters in their hour of need.
— Narendra Modi (@narendramodi) May 26, 2017
ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗಾಗಿ ಭಾರತ ಸರ್ಕಾರ ನೌಕಾ ಪಡೆ ಹಾಗೂ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
India condoles the loss of lives and property in Sri Lanka due to flooding and landslides.
— Narendra Modi (@narendramodi) May 26, 2017
ನೌಕಾ ಪಡೆಯೊಂದಿಗೆ ವೈದ್ಯಕೀಯ ಸಾಮಾಗ್ರಿಗಳು, ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ವ್ಯವಸ್ಥೆ ಕೂಡಾ ಒದಗಿಸಲಾಗಿದ್ದು, ಶ್ರೀಲಂಕಾದ ಸಹೋದರ- ಸಹೋದರಿಯರ ನೆರವಿಗೆ ನಾವ್ ಧಾವಿಸುತ್ತೇವೆ ಎಂದಿದ್ದಾರೆ.(ಪಿಟಿಐ)












Click it and Unblock the Notifications