Arvind Kejriwal: 'ಮೋದಿ ಎಲ್ಲಾ ಕ್ಷೇತ್ರಗಳನ್ನು ಅಸ್ತವ್ಯಸ್ತಗೊಳಿಸಿದ್ದಾರೆ' ಅರವಿಂದ್ ಕೇಜ್ರಿವಾಲ್
ಬೆಂಗಳೂರು ಜುಲೈ 18: 'ಪ್ರಧಾನಿ ಮೋದಿ ಅವರು ತಮ್ಮ ಆಡಳಿತದಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದ್ದಾರೆ, ಅವರನ್ನು ತೊಡೆದುಹಾಕಲು ಸಮಯ ಬಂದಿದೆ' ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ನ್ ಮೀಟ್‌ನಲ್ಲಿ ಹೇಳಿದರು.

"ಪ್ರಧಾನಿ ಮೋದಿಗೆ ಕಳೆದ ಹತ್ತು ವರ್ಷಗಳಿಂದ ದೇಶವನ್ನು ಆಳುವ ಅವಕಾಶ ಸಿಕ್ಕಿತು. ಅವರು ದೇಶದ ಪ್ರತಿಯೊಂದು ಕ್ಷೇತ್ರವನ್ನು ಸಂಪೂರ್ಣ ಅವ್ಯವಸ್ಥೆಗೊಳಿಸಿದ್ದಾರೆ. ಅವರು ಜನರ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಾರೆ, ಆರ್ಥಿಕತೆ ಹದಗೆಟ್ಟಿದೆ. ಹೆಚ್ಚು ಹಣದುಬ್ಬರ, ಎಲ್ಲಾ ಕ್ಷೇತ್ರಗಳಲ್ಲಿ ತುಂಬಾ ನಿರುದ್ಯೋಗ ಕಾಡುತ್ತಿದೆ".
"ಈ ದೇಶದ ಜನರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಬಯಸುತ್ತಿರುವ ಸಮಯ ಬಂದಿದೆ. ಆದ್ದರಿಂದ ಎಲ್ಲರೂ ಒಗ್ಗೂಡಬೇಕಾಗಿದೆ" ಎಂದು ದೆಹಲಿ ಸಿಎಂ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷಗಳ ಸಭೆಯಲ್ಲಿ ಹೇಳಿದರು.
ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಏಕತಾ ಸಭೆ 2ನೇ ದಿನ ನಡೆಯುತ್ತಿದೆ. ಈ ಸಭೆಯಲ್ಲಿ ನಾನಾ ರಾಜ್ಯಗಳ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಈ ವೇಳೆ "ಬೆಂಗಳೂರಿನಲ್ಲಿ 26 ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲು ಮುಂದಾಗಿರುವುದು ನನಗೆ ಖುಷಿ ತಂದಿದೆ. ಇಂದು ನಾವು 11 ರಾಜ್ಯಗಳಲ್ಲಿ ಒಟ್ಟಾಗಿ ಸರ್ಕಾರ ನಡೆಸುತ್ತಿದ್ದೇವೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
ಇನ್ನೂ "ಈ ಸಭೆಯಲ್ಲಿ ನಮ್ಮ ಉದ್ದೇಶ ನಮಗಾಗಿ ಅಧಿಕಾರವನ್ನು ಗಳಿಸುವುದು ಅಲ್ಲ. ಇದು ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು. ಭಾರತವನ್ನು ಪ್ರಗತಿ, ಕಲ್ಯಾಣ ಮತ್ತು ನಿಜವಾದ ಪ್ರಜಾಪ್ರಭುತ್ವದ ಹಾದಿಗೆ ಹಿಂತಿರುಗಿಸಲು ನಾವು ಸಂಕಲ್ಪ ಮಾಡೋಣ" ಎಂದು ಅವರು ಸೇರಿಸುತ್ತಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವುದು ಮಹಾಘಟಬಂಧನದ ಉದ್ದೇಶ. ಈ ನಿಟ್ಟಿನ ನಗರ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಮಹತ್ವದ ಸಭೆ ಇಂದು ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದೆ. ಸದ್ಯ ಸಭೆಯಲ್ಲಿ ಬರೊಬ್ಬರಿ 24 ಪಕ್ಷಗಳ, 40ಕ್ಕೂ ಅಧಿಕ ನಾಯಕರು ಭಾಗಿಯಾಗಿದ್ದಾರೆ.












Click it and Unblock the Notifications