ಗುಜರಾತ್‌ನಲ್ಲಿ ಪ್ರವಾಹ: ಪ್ರಧಾನಿ ಮೋದಿಯಿಂದ ಉನ್ನತ ಮಟ್ಟದ ಸಭೆ
ಅಹಮದಾಬಾದ್, ಜುಲೈ 25: ಮಳೆಯಿಂದ ತತ್ತರಿಸಿರುವ ಗುಜರಾತ್ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.
ಬೆಳಿಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಮೋದಿ ಗುಜರಾತ್ ರಾಜಧಾನಿ ಅಹಮದಾಬಾದ್‌ಗೆ ಬಂದಿಳಿದರು.

ನಂತರ ಅವರು ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತು ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಪ್ರವಾಹ ಪರಿಸ್ಥಿತಿಯ ಸಂಪೂರ್ಣ ಚಿತ್ರಣ ಅರಿತುಕೊಳ್ಳಲು ಮೋದಿ ನಿರ್ಧರಿಸಿದ್ದು ಬಹುಶಃ ನಾಳೆ ನರೇಂದ್ರ ಮೋದಿ ಗುಜರಾತ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಸಾಧ್ಯತೆ ಇದೆ.
ಗುಜರಾತ್ ಮತ್ತು ಪಕ್ಕದ ರಾಜಸ್ಥಾನದಲ್ಲಿ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಮುಳಗಡೆಯಾಗಿವೆ. ಪ್ರವಾಹದಿಂದ 20ಕ್ಕೂ ಹೆದ್ದಾರಿಗಳು ಜಲಾವೃತವಾಗಿವೆ. ಎರಡೂ ರಾಜ್ಯಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
PM @narendramodi landed in Ahmedabad. He will take stock of the situation arising due to floods in parts of Gujarat. pic.twitter.com/8d2LIoqsqw
— PMO India (@PMOIndia) July 25, 2017
ಇದಲ್ಲದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ವಾಯುಪಡೆ ಹೆಲಿಕಾಪ್ಟರ್ ಗಳ ಮೂಲಕ ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲಾಗಿದೆ ಮತ್ತು ಹಲವು ಕಡೆಗಳಲ್ಲಿ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ.
ಶನಿವಾರದವರೆಗೂ ಎರಡೂ ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.












Click it and Unblock the Notifications