Loksabha Election 2024: ಮೋದಿ ಮ್ಯಾಜಿಕ್, ಹಿಂದುತ್ವ ಕೆಲಸ ಮಾಡಲ್ಲ: ಬಿಜೆಪಿಗೆ ಎಚ್ಚರಿಕೆ ಕೊಟ್ಟ 'ಆರ್ಗನೈಸರ್'
2024ರ ಲೋಕಸಭಾ ಚುನಾವಣೆ ಹತ್ತಿರುವಾಗುತ್ತಿರುವ ಹಿನ್ನಲೆಯಲ್ಲಿ ಆರ್‌ಎಸ್‌ಎಸ್ ಮುಖವಾಣಿ-ಆರ್ಗನೈಸರ್ ವಾರಪತ್ರಿಕೆ ಬಿಜೆಪಿಗೆ ಎಚ್ಚರಿಕೆ ಕೊಟ್ಟಿದೆ. ಈ ಬಾರಿ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವ ಅಜೆಂಡಾಗಳು ಕೆಲಸ ಮಾಡಲ್ಲ ಎಂದು ಹೇಳಿದೆ.
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಯಕರು ರಾಜ್ಯದಲ್ಲಿ ಠಿಕಾಣಿ ಹೂಡಿ ಅಬ್ಬರದ ಪ್ರಚಾರ ಮಾಡಿದರೂ ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿತು. ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿತು. ಇದನ್ನು 2024ರ ಚುನಾವಣೆಯ ದಿಕ್ಸೂಚಿ ಎಂದು ಕೆಲವರು ವ್ಯಾಖ್ಯಾನಿಸಿದ್ದಾರೆ.

ಈ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿರುವ ಆರ್‌ಎಸ್‌ಎಸ್‌ನ ಅಂಗಸಂಸ್ಥೆ ನಿಯತಕಾಲಿಕೆಯು ಬಿಜೆಪಿಗೆ ಪ್ರಾದೇಶಿಕ ಮಟ್ಟದಲ್ಲಿ ಬಲವಾದ ನಾಯಕತ್ವ ಪರಿಣಾಮಕಾರಿಯಾಗಿ ಸಿಗುವ ಅಗತ್ಯವಿದೆ ಎನ್ನುವುದನ್ನು ಒತ್ತಿ ಹೇಳಿದೆ. ಪ್ರಾದೇಶಿಕ ಮಟ್ಟದಲ್ಲಿ ಪ್ರಬಲ ನಾಯಕತ್ವ ಕೊರತೆಯಿದ್ದು, ಪ್ರಧಾನಿ ಮೋದಿಯವರ ವರ್ಚಸ್ಸು ಮತ್ತು ಹಿಂದುತ್ವ ಮಾತ್ರವೇ ಸಾಕಾಗಲ್ಲ ಎಂದು ಎಚ್ಚರಿಕೆ ಕೊಟ್ಟಿದೆ.
ಯೋಚಿಸಲು ಬಿಜೆಪಿಗೆ ಇದು ಸರಿಯಾದ ಸಮಯ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಜನಾಭಿಪ್ರಾಯ ಬಂದಿದೆ. 2024ರ ಲೋಕಸಭಾ ಚುನಾವಣೆಯನ್ನು ಸುಲಭವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಗೆ ಇದು ಸರಿಯಾದ ಸಮಯ ಎಂದು ಆರ್ಗನೈಸರ್ ಸಲಹೆ ನೀಡಿದೆ.
ಕರ್ನಾಟಕ ಚುನಾವಣೆಯಲ್ಲಿ ಭ್ರಷ್ಟಾಚಾರ ಪ್ರಮುಖ ವಿಷಯವಾಗಿತ್ತು, ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ಸಮರ್ಥಿಸಿಕೊಳ್ಳಬೇಕಾಯಿತು ಎಂದು ಹೇಳಿದೆ.
ಸ್ಥಳೀಯ ನಾಯಕರನ್ನು ಮುನ್ನಲೆಗೆ ತಂದ ಕಾಂಗ್ರೆಸ್
ಆಡಳಿತ ಪಕ್ಷವಾಗಿದ್ದ ಬಿಜೆಪಿ ಕರ್ನಾಟಕದಲ್ಲಿ ರಾಷ್ಟ್ರೀಯ ನಾಯಕರನ್ನು ಕರೆಸಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿದರೆ, ಕಾಂಗ್ರೆಸ್ ಸ್ಥಳೀಯ ಮಟ್ಟದ ನಾಯಕರನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿರು. ಹಿಂದಿನ ಬಾರಿ ಪಡೆದಿದ್ದ ಮತಗಳ ಜೊತೆ ಹೊಸದಾಗಿ ಮತದಾರರನ್ನು ಸೆಳೆಯಲು ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ, ಇದೇ ಕಾರಣಕ್ಕೆ ಬಿಜೆಪಿ ಹೀನಾಯ ಸೋಲು ಕಂಡಿದೆ, ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನಿಲುವಿನ ಬಗ್ಗೆ ಬಿಜೆಪಿ ಹೆಚ್ಚಾಗಿ ಯೋಚಿಸಬೇಕು ಎಂದು ಹೇಳಿದೆ.
ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ನ ರಾಜ್ಯದ, ಸ್ಥಳೀಯ ನಾಯಕರು ಮುಂಚೂಣಿಯಲ್ಲಿದ್ದರೆ ರಾಷ್ಟ್ರಮಟ್ಟದ ನಾಯಕರು ಅವರನ್ನು ಬೆಂಬಲಿಸುವ ಕೆಲಸ ಮಾಡಿದರು ಎಂದು ಉಲ್ಲೇಖಿಸಿದೆ. ಆದರೆ ಬಿಜೆಪಿ ಮಾತ್ರ ಸ್ಥಳೀಯ ನಾಯಕರನ್ನು ಮುನ್ನಲೆಗೆ ತರದೆ ಮೋದಿ ಮಂತ್ರ ಜಪಿಸಿತು ಎಂದು ಹೇಳಿದೆ.
"ಕಾಂಗ್ರೆಸ್ 2018ರ ವಿಧಾನಸಭಾ ಚುನಾವಣೆಯಲ್ಲಿ ಪಡೆದಿದ್ದಕ್ಕಿಂತ ಶೇಕಡಾ 5ರಷ್ಟು ಹೆಚ್ಚಿನ ಮತಗಳನ್ನು ಪಡೆದುಕೊಂಡಿತು. ಜೆಡಿಎಸ್ ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಎಲ್ಲಿಯವರೆಗೆ ಸ್ಥಿರ ಸರ್ಕಾರವನ್ನು ನೀಡುತ್ತದೆ ಮತ್ತು ಜನರಿಗೆ ನೀಡಿದ ದೊಡ್ಡ ಭರವಸೆಗಳನ್ನು ಈಡೇರಿಸುತ್ತದೆ ಎಂದು ಸಮಯವೇ ಹೇಳುತ್ತದೆ ಎಂದು ಸಂಪಾದಕೀಯದಲ್ಲಿ ಹೇಳಲಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications