International Yoga Day 2025: ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೋದಿ ಭಾಗಿ
ವಿಶಾಖಪಟ್ಟಣಂ, ಜೂನ್ 21: ಇಂದು ದೇಶಾದ್ಯಂತ 11ನೇ ಅಂತರಾಷ್ಟ್ರೀಯ ಯೋಗಾ ದಿನ ಆಚರಿಸಲಾಗುತ್ತಿದೆ. ವಿಶಾಖಪಟ್ಟಣಂನಲ್ಲಿ ಅಂತರಾಷ್ಟ್ರೀಯ ಯೋಗಾ ದಿನಾಚರಣೆಗೆ ವೇದಿಕೆ ಸಜ್ಜುಗಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ.
ಅಂತರಾಷ್ಟ್ರೀಯ ಯೋಗಾ ದಿನ ಆಚರಣೆ ಹಿನ್ನೆಲೆ ಆರ್‌ಕೆ ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಯೋಗ ನಡೆಯುತ್ತಿದೆ. 3 ಲಕ್ಷಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಮಾಡುತ್ತಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಸಚಿವರು ಸಾಥ್ ನೀಡಿದ್ದಾರೆ. ಇಂದು ಅಂತರಾಷ್ಟ್ರೀಯ ಯೋಗ ದಿನ. ಭಾರತ ಮಾತ್ರವಲ್ಲದೇ ಇಡೀ ವಿಶ್ವದಾದ್ಯಂತ ಬಹಳ ಅದ್ಧೂರಿಯಾಗಿ ಯೋಗ ದಿನಾಚರಣೆ ಆಚರಣೆ ಮಾಡಲಾಗ್ತಿದೆ. ಸುಮಾರು 3.19 ಲಕ್ಷ ಜನರು ಏಕಾಕಾಲಕ್ಕೆ ಯೋಗ ಮಾಡ್ತಿದ್ದು, ಸುಮಾರು 25 ಸಾವಿರ ವಿದ್ಯಾರ್ಥಿಗಳು 108 ನಿಮಿಷಗಳ ಕಾಲ ಸೂರ್ಯ ನಮಸ್ಕಾರ ಮಾಡಿ ಗಮನ ಸೆಳೆದಿದ್ದಾರೆ. ಜೊತೆಗೆ ಈ ಅರ್ಥ ಪೂರ್ಣ ಕಾರ್ಯಕ್ರಮ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ.

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಯೋಗ ಕೇವಲ ವ್ಯಾಯಾಮವಲ್ಲ. ಅದೊಂದು ಜೀವನ ವಿಧಾನ. ವಿಶಾಖಪಟ್ಟಣಂನಲ್ಲಿ ಈ ವರ್ಷದ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅದ್ಭುತವಾಗಿದೆ ಎಂದು ಮೋದಿ ಶುಭ ಕೋರಿದ್ದಾರೆ. yoga for one health one earth ಎಂಬ ಥೀಮ್‌ನೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಆಂಧ್ರಪ್ರದೇಶ ಸರ್ಕಾರದ ಆಶ್ರಯದಲ್ಲಿ ಯೋಗ ಆಂಧ್ರ 2025 ಎಂಬ ಹೆಸರಿನಲ್ಲಿ ಆಯೋಜಿಸಲಾಗಿದೆ.
ಆಂಧ್ರ ಪ್ರದೇಶ ಸರ್ಕಾರವು ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದು, ಈ ಯೋಗ ದಿನದಲ್ಲಿ ಸರ್ಕಾರಿ ನೌಕರರು, ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಸ್ವಯಂಸೇವಕರು, ಯೋಗ ಸಂಘಗಳು, ನೌಕಾಪಡೆ, ಕೋಸ್ಟ್ ಗಾರ್ಡ್ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಲ್ಲದೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವ ನಾರಾ ಲೋಕೇಶ್, ಇತರ ಸಾರ್ವಜನಿಕ ಪ್ರತಿನಿಧಿಗಳು, ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇನ್ನೂ ಯೋಗ ದಿನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ, ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ. ಇಂದು ಯೋಗ ವಿಶ್ವಾದ್ಯಂತ ಒಂದು ಆಂದೋಲನವಾಗಿ ಮಾರ್ಪಟ್ಟಿದೆ.ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ ಎಂದು ಹೇಳಿದರು.
ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ. ಮಾನವೀಯತೆ, ಶಾಂತಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ನೆರವಾಗಲಿದೆ. ಯೋಗ ಹಲವು ದೇಶಗಳ ಜೊತೆ ಬಾಂಧವ್ಯ ವೃದ್ಧಿಗೆ ನೆರವಾಗಿದೆ. ನೌಕಾಪಡೆ ಸಿಬ್ಬಂದಿ ನೌಕೆಯಲ್ಲೇ ಯೋಗಾಸನ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಕೂಡ ಯೋಗಾಸನ ಮಾಡಬೇಕು ಎಂದು ಹೇಳಿದರು.
-
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications