ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಧೋರಣೆಗಳಿಂದ ಉಗ್ರರ ಹಾವಳಿ ಹೆಚ್ಚಳ: ರಾಹುಲ್

ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರವಾದಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್. ಪ್ರಧಾನಿ ನರೇಂದ್ರ ಮೋದಿ ಅವರ ಧೋರಣೆಯನ್ನು ಟೀಕಿಸಿದ ರಾಹುಲ್.

|
Google Oneindia Kannada News

ನವದೆಹಲಿ, ಜುಲೈ 12: ಜಮ್ಮು ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ಮೋದಿ ಅನುಸರಿಸುತ್ತಿರುವ 'ಅಲ್ಪಕಾಲಿಕ ಪ್ರಯೋಜನ'ದ ಧೋರಣೆಗಳಿಂದಾಗಿಯೇ ಕಾಶ್ಮೀರ ಕಣಿವೆಯಲ್ಲಿ ಉಗ್ರವಾದಿಗಳ ಹಾವಳಿ ಹೆಚ್ಚಾಗಲು ಕಾರಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಇತ್ತೀಚೆಗೆ, ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿಯಿಂದಾಗಿ ಏಳು ಜನರು ಸಾವಿಗೀಡಾದ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಈ ರೀತಿಯಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಗುಪ್ತಚರ ಮಾಹಿತಿ ಇದ್ದೂ ಅಮರನಾಥ ದಾಳಿ ನಡೆದಿದ್ದು ಹೇಗೆ?ಗುಪ್ತಚರ ಮಾಹಿತಿ ಇದ್ದೂ ಅಮರನಾಥ ದಾಳಿ ನಡೆದಿದ್ದು ಹೇಗೆ?

ಜಮ್ಮುು ಕಾಶ್ಮೀರದಲ್ಲಿ ಪಿಡಿಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯು ಅಲ್ಲಿ ಸಮ್ಮಿಶ್ರ ಸರ್ಕಾರವನ್ನು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯ ಮಂಡಿಸಿರುವ ರಾಹುಲ್ ಗಾಂಧಿ, ''ಕಾಶ್ಮೀರದಲ್ಲಿ ಪಿಡಿಪಿ ಜತೆಗೆ ಸಮ್ಮಿಶ್ರ ಸರ್ಕಾರ ಮಾಡಿಕೊಂಡಿದ್ದರಿಂದಲೇ ಪ್ರಧಾನಿ ಮೋದಿಯವರಿಗೆ ಕಾಶ್ಮೀರದಲ್ಲಿ ಕಠಿಣ ಕ್ರಮಗಳನ್ನು ಕೈಗೊಲ್ಳಲಾಗುತ್ತಿಲ್ಲ. ಹಾಗಾಗಿಯೇ, ಅಲ್ಲಿ ಉಗ್ರರ ಹಾವಳಿ ಹೆಚ್ಚಿದೆ'' ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿಎಚ್ ಪಿ ವಾಗ್ದಾಳಿನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿಎಚ್ ಪಿ ವಾಗ್ದಾಳಿ

English summary
Congress vice president Rahul Gandhi said on Wednesday that Prime Minister Narendra Modi's quest for "short term political gain" has "created space for terrorists in Kashmir", leading to incidents like the terror attack on Amarnath pilgrims on Monday, which left seven people dead.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X