'ಮೋದಿ ಚುನಾವಣೆ ಭರವಸೆಗಳು ಬರೀ ಬೊಗಳೆ'

ನವದೆಹಲಿ, ಸೆಪ್ಟೆಂಬರ್, 08 : 'ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಕೆಲಸಗಳಿಗೂ ಚುನಾವಣಾ ಸಮಯದಲ್ಲಿ ಅವರು ನೀಡಿದ್ದ ಭರವಸೆಗಳಿಗೂ ತಾಳೆಯಾಗುತ್ತಿಲ್ಲ. ಸರ್ಕಾರದ ನಿಜವಾದ ನಿಲುವು ಏನೆಂದು ಜನರಿಗೆ ಅರ್ಥವಾಗುತ್ತಿಲ್ಲ' ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, 'ಚುನಾವಣಾ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ನೀಡಿದ್ದ ವಾಗ್ದಾನಗಳು ಬರೀ ಬೊಗಳೆ' ಎಂದು ಆರೋಪಿಸಿದರು. [ನೀವೇನ್ ಮಾಡ್ತಿದ್ರಿ? ಸೋನಿಯಾಗೆ ಸುಷ್ಮಾ ನೇರ ಪ್ರಶ್ನೆ]

'ನರೇಂದ್ರ ಮೋದಿ ಅವರ ಸರ್ಕಾರ ನೈಜತೆಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಭೂಸ್ವಾಧೀನ ಮಸೂದೆ ಸುಗ್ರೀವಾಜ್ಞೆಯನ್ನು ವಾಪಸ್ ಪಡೆದಿರುವುದೇ ಇದಕ್ಕೆ ಸಾಕ್ಷಿ. ಸರ್ಕಾರ ನೀಡಿದ ಭರವಸೆಗಳಿಗೂ ಅದರ ಕಾರ್ಯಗಳಿಗೂ ಸಂಬಂಧವೇ ಇಲ್ಲ' ಎಂದು ಸೋನಿಯಾ ಗಾಂಧಿ ಹೇಳಿದರು.['ಮೋದಿ ಸರ್ಕಾರ ಅಪಾಯಕಾರಿ ಆಟವಾಡುತ್ತಿದೆ']

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧಿಕಾರಾವಧಿ ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳುತ್ತಿತ್ತು. ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಇಂದಿನ ಸಭೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಒಂದು ವರ್ಷಗಳ ಕಾಲ ಮುಂದುವರೆಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಾರ್ಯಕಾರಿ ಸಮಿತಿ ಸಭೆಯ ಚಿತ್ರಗಳು ಇಲ್ಲಿವೆ... [ಪಿಟಿಐ ಚಿತ್ರಗಳು]

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ

ನವದೆಹಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. 'ಬಿಜೆಪಿ ಹಿಂದೆ ನೀಡಿದ್ದ ಭರವಸೆಗಳಿಗೂ ಈಗ ಕಾರ್ಯನಿರ್ವಹಿಸುತ್ತಿರುವ ರೀತಿಗೂ ಸಂಬಂಧವೇ ಇಲ್ಲ' ಎಂದು ಅವರು ಆರೋಪಿಸಿದ್ದಾರೆ.

'ಬೆದರಿಸುವ ಕೆಲಸ ಮಾಡುತ್ತಿದೆ'

'ಬೆದರಿಸುವ ಕೆಲಸ ಮಾಡುತ್ತಿದೆ'

'ಬಿಜೆಪಿ ಮಾಧ್ಯಮಗಳನ್ನು ಬೆದರಿಸುವ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದ ಸೋನಿಯಾ ಗಾಂಧಿ ಅವರು, 'ದೇಶದಲ್ಲಿ ಆರ್ಥಿಕತೆ ಕುಸಿಯುತ್ತಿದೆ. ಬೆಲೆ ಏರಿಕೆ ಮುಂದುವರೆದಿದೆ ಇವುಗಳನ್ನು ತಡೆಯಲು ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ' ಎಂದು ಅವರು ಆರೋಪಿಸಿದರು.

'ಪಾಕ್‌ ಬಗ್ಗೆ ನಿಲುವು ಸ್ಪಷ್ಟಪಡಿಸಿ'

'ಪಾಕ್‌ ಬಗ್ಗೆ ನಿಲುವು ಸ್ಪಷ್ಟಪಡಿಸಿ'

ನೆರೆಯ ಪಾಕಿಸ್ತಾನ ಜೊತೆಗಿನ ಸಂಘರ್ಷದ ಕುರಿತು ಆತಂಕ ವ್ಯಕ್ತಪಡಿಸಿದ ಸೋನಿಯಾ ಗಾಂಧಿ ಅವರು, 'ನೆರೆ ರಾಷ್ಟ್ರದ ವಿಚಾರದಲ್ಲಿ ಸರ್ಕಾರದ ನಿಲುವೇನು ಎಂದು ಸ್ಪಷ್ಟಪಡಿಸಬೇಕು' ಎಂದು ಸೋನಿಯಾ ಗಾಂಧಿ ಒತ್ತಾಯಿಸಿದರು.

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನವಿಲ್ಲ

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನವಿಲ್ಲ

ಇಂದಿನ ಸಭೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಒಂದು ವರ್ಷಗಳ ಕಾಲ ಮುಂದುವರೆಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಆದ್ದರಿಂದ, ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಬಹುದು ಎಂದು ಹರಡಿದ್ದ ಸುದ್ದಿಗಳಿಗೆ ತೆರೆ ಬಿದ್ದಂತಾಗಿದೆ.

ಒಂದು ವರ್ಷ ಅವಧಿ ವಿಸ್ತರಣೆ

ಒಂದು ವರ್ಷ ಅವಧಿ ವಿಸ್ತರಣೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧಿಕಾರಾವಧಿ ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳುತ್ತಿತ್ತು. ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಸೋನಿಯಾ ಅಧಿಕಾರಾವಧಿಯನ್ನು 1 ವರ್ಷಗಳಿಗೆ ವಿಸ್ತರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+