Modi surname case: ಕ್ಷಮೆ ಕೇಳಲ್ಲವೆಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ರಾಹುಲ್ ಗಾಂಧಿ- ಕಾರಣ ನೀಡಿದ ಕಾಂಗ್ರೆಸ್ ನಾಯಕ
ನವದೆಹಲಿ, ಆಗಸ್ಟ್ 02: 'ಮೋದಿ ಉಪನಾಮೆ' ಪ್ರಕರಣದಲ್ಲಿ ನಾನು ತಪ್ಪಿತಸ್ಥನಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಗುಜರಾತ್ ನ್ಯಾಯಾಲಯ ನೀಡಿರುವ ಶಿಕ್ಷೆಯು ಸಮರ್ಥನೀಯವಲ್ಲ. ಈ ಹಿನ್ನೆಲೆಯಲ್ಲಿ ನಾನು ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲವೆಂದು ಅವರು ಹೇಳಿದ್ದಾರೆ.
ನಾನು ಕ್ಷಮೆ ಯಾಚಿಸಲು ನಿರಾಕರಿಸಿದ್ದಕ್ಕಾಗಿ ದೂರುದಾರ ಪೂರ್ಣೇಶ್ ಮೋದಿ ಅವರು ನನ್ನನ್ನು ಅಹಂಕಾರಿ ಎಂದು ಕರೆದಿದ್ದಾರೆ. ನನ್ನ ವಿರುದ್ಧ ನಿಂದೆಯ ಪದ ಬಳಸಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ರಾಹುಲ್ ಗಾಂಧಿ ಅಫಿಡವಿಟ್ ಸಲ್ಲಿಸಿದ್ದಾರೆ.

'ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ, ನನ್ನ ಕ್ಷಮೆಯಾಚನೆಗೆ ಒತ್ತಾಯಿಸಲಾಯಿತು. ನನ್ನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯನ್ನು ಬಳಸಲಾಯಿತು. ಈ ವಿಚಾರದಲ್ಲಿ ನ್ಯಾಯಾಂಗ ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಬಾರದು' ಎಂದು ರಾಹುಲ್ ಗಾಂಧಿ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಈ ಅಪರಾಧವನ್ನು ಕ್ಷುಲ್ಲಕ ಅಪರಾಧವೆಂದು ಪರಿಗಣಿಸಬೇಕು. ಈ ಪ್ರಕರಣದ ನನಗೆ ಸರಿಪಡಿಸಲಾಗದ ಹಾನಿಯಾಗಿದೆ ಎಂದು ರಾಹುಲ್ ಹೇಳಿದ್ದಾರೆ.
ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಲೋಕಸಭೆಯ ಸಂಸದ ಸ್ಥಾನವನ್ನು ಅನೂರ್ಜಿತಗೊಳಿಸಲಾಗಿದೆ.

ಲೋಕಸಭೆ ಅಧಿವೇಶನಗಳಲ್ಲಿ ಭಾಗವಹಿಸಲು ನನಗೆ ಅನುವು ಮಾಡಿಕೊಡಿಕೊಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.
ಈ ವರ್ಷದ ಮಾರ್ಚ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಗುಜರಾತ್ ಸ್ಥಳೀಯ ನ್ಯಾಯಾಲಯ ಘೋಷಿಸಿತು. ಈ ಮೂಲಕ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಇದು ಲೋಕಸಭೆಯ ಸಂಸದರ ಅನರ್ಹತೆಗೆ ಕಾರಣವಾಯಿತು. ಜುಲೈ 7 ರಂದು, ಹೈಕೋರ್ಟ್ ಈ ಆದೇಶವನ್ನು ಎತ್ತಿಹಿಡಿಯಿತು.












Click it and Unblock the Notifications