ಮೋದಿ ಉಪನಾಮ ಪ್ರಕರಣ: ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ, ರಾಹುಲ್ ಗಾಂಧಿಗೆ ಮತ್ತೆ ಸಂಸದ ಸ್ಥಾನ!
ನವದೆಹಲಿ, ಆಗಸ್ಟ್. 04: 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ "ಮೋದಿ ಉಪನಾಮ" ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದ್ದು, ಸಂಸತ್ ಸದಸ್ಯರಾಗಿ ಅವರ ಸ್ಥಾನಮಾನವನ್ನು ಮತ್ತೆ ನೀಡಿದೆ. ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ, ರಾಹುಲ್ ಗಾಂಧಿಯವರ ಶಿಕ್ಷೆಯ ಪರಿಣಾಮಗಳು ವ್ಯಾಪಕವಾಗಿದ್ದು, ಇದು ಅವರನ್ನು ಆಯ್ಕೆ ಮಾಡಿದ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019 ರಲ್ಲಿ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಡಿದ ಭಾಷಣದಲ್ಲಿ "ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ..?" ಎಂದು ಹೇಳಿದ್ದರು. ಇದು ದೂರು ದಾಖಲಿಸಲು ಕಾರಣವಾಗಿತ್ತು.

ರಾಹುಲ್ ಗಾಂಧಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, "ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಕಾಂಗ್ರೆಸ್ ನಾಯಕನ ವಿರುದ್ಧ "ವಿಚಿತ್ರ" ಎಂದು ದಾಖಲಿಸಿರುವ ಪ್ರಕರಣವೇ ವಿಚಿತ್ರವಾಗಿದೆ. ಅವರು ತಮ್ಮ ಭಾಷಣದ ಸಮಯದಲ್ಲಿ ಹೆಸರಿಸಿದ ಒಬ್ಬ ವ್ಯಕ್ತಿಯೂ ಮೊಕದ್ದಮೆ ಹೂಡಲಿಲ್ಲ. ಕುತೂಹಲಕಾರಿಯಾಗಿ, 13 ಕೋಟಿಯ ಈ 'ಸಣ್ಣ' ಸಮುದಾಯದಲ್ಲಿ ನೊಂದವರೆಲ್ಲರೂ, ಮೊಕದ್ದಮೆ ಹೂಡುವವರೆಲ್ಲರೂ ಬಿಜೆಪಿ ಕಚೇರಿಯವರು. ಇದು ತುಂಬಾ ವಿಚಿತ್ರ" ಎಂದು ಹೇಳಿದ್ದರು.
ವಿಚಾರಣಾ ನ್ಯಾಯಾಧೀಶರು ಈ ಪ್ರಕರಣದಲ್ಲಿ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಗಮನಿಸಿದ್ದು, ಶಿಕ್ಷೆಯು ಒಂದು ದಿನ ಕಡಿಮೆಯಿದ್ದರೆ ಅದು ಸಂಸದ ಸ್ಥಾನದ ಅನರ್ಹತೆಗೆ ಕಾರಣವಾಗುವುದಿಲ್ಲ ಎಂಬುದನ್ನು ಒತ್ತಿ ಹೇಳಿದೆ. ಜೊತೆಗೆ ಅರ್ಜಿದಾರರ ಮಾತುಗಳು ಉತ್ತಮ ಅಭಿರುಚಿಯಲ್ಲಿರಲಿಲ್ಲ ಎಂಬುದರಲ್ಲಿ ಸಂದೇಹವಿಲ್ಲ. ಅರ್ಜಿದಾರರು ಭಾಷಣ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ನ್ಯಾಯಾಲಯ ಹೇಳಿದೆ.

ಸಂಸತ್ತಿಗೆ ಹಾಜರಾಗಲು ಮತ್ತು ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿ ಅವರಿಗೆ ಖುಲಾಸೆಗೊಳಿಸಲು ಇದು ಕೊನೆಯ ಅವಕಾಶವಾಗಿದೆ ಎಂದು ಅವರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಹೈಕೋರ್ಟ್ ತನ್ನ ತೀರ್ಪನ್ನು 66 ದಿನಗಳವರೆಗೆ ಕಾಯ್ದಿರಿಸಿತ್ತು ಮತ್ತು ಪ್ರಕರಣದಲ್ಲಿ ಶಿಕ್ಷೆಯ ಕಾರಣದಿಂದಾಗಿ, ರಾಹುಲ್ ಗಾಂಧಿ ಅವರು ಈಗಾಗಲೇ ಎರಡು ಸಂಸತ್ತು ಅಧಿವೇಶನಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ನ್ಯಾಯಾಲಯದ ಮುಂದೆ ತಿಳಿಸಿದ್ದಾರೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತನ್ನ ವಿರುದ್ಧದ ದೋಷಾರೋಪಣೆಗೆ ತಡೆಯಾಜ್ಞೆ ನೀಡುವಂತೆ ರಾಹುಲ್ ಗಾಂಧಿ ಮಾಡಿದ ಮನವಿಯ ವಿಚಾರಣೆ ನಡೆಸುತ್ತಿದೆ. ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು.
Supreme Court in an interim order stays the conviction of Congress leader Rahul Gandhi in the criminal defamation case over 'Modi surname' remark pic.twitter.com/BOPuCmYhXz
— ANI (@ANI) August 4, 2023
ಶಿಕ್ಷೆಯಿಂದಾಗಿ ವಯನಾಡ್ ಕ್ಷೇತ್ರಕ್ಕೆ ಪ್ರಾತಿನಿಧ್ಯ ಸಿಗದಿರುವುದು ಸೂಕ್ತ ಅಂಶವೇ ಎಂದು ಪ್ರಶ್ನಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ, ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಗರಿಷ್ಠ ಶಿಕ್ಷೆಯನ್ನು ಏಕೆ ನೀಡಿದರು ಎಂಬುದನ್ನು ವಿಚಾರಣಾ ನ್ಯಾಯಾಧೀಶರು ವಿವರಿಸಬೇಕು ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿಚಾರಣೆ ಪೂರ್ಣಗೊಂಡಿದೆ ಮತ್ತು ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಒತ್ತಿ ಹೇಳಿದ್ದಾರೆ. ಜೊತೆಗೆ ದೂರುದಾರ ಪೂರ್ಣೇಶ್ ಮೋದಿ ಅವರ ಮೂಲ ಉಪನಾಮ ಮೋದಿ ಅಲ್ಲ, ಮತ್ತು ಅವರು ಅದನ್ನು ಬದಲಾಯಿಸಿದ್ದಾರೆ ಎಂದು ವಾದಿಸಿದ್ದಾರೆ.

"ದೂರುದಾರ ಪೂರ್ಣೇಶ್ ಮೋದಿ ಅವರೇ ತಮ್ಮ ಮೂಲ ಉಪನಾಮ ಮೋದಿ ಅಲ್ಲ ಎಂದು ಹೇಳಿದ್ದಾರೆ. ಅವರು ಮೋದ್ ವನಿಕಾ ಸಮಾಜಕ್ಕೆ ಸೇರಿದವರು. ರಾಹುಲ್ ಗಾಂಧಿಯವರು ತಮ್ಮ ಭಾಷಣದ ಸಮಯದಲ್ಲಿ ಹೆಸರಿಸಿದ ವ್ಯಕ್ತಿಗಳಲ್ಲಿ ಒಬ್ಬರೂ ತಮ್ಮ ವಿರುದ್ಧ ಮೊಕದ್ದಮೆ ಹೂಡಲಿಲ್ಲ ಎಂಬುದನ್ನು ಬೊಟ್ಟು ಮಾಡಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ಮತ್ತು ನಂತರ ಸಂಸತ್ತಿನ ಅನರ್ಹತೆಗೆ ಕಾರಣವಾದ ಮೋದಿ ಉಪನಾಮದ ಹೇಳಿಕೆಗೆ ಕ್ಷಮೆಯಾಚಿಸಲು ರಾಹುಲ್ ಗಾಂಧಿ ಮತ್ತೊಮ್ಮೆ ನಿರಾಕರಿಸಿದ್ದರು. ತಾವು ತಪ್ಪಿತಸ್ಥರಲ್ಲ ಎಂದು ಹೇಳಿದ್ದ ಅವರು ಸುಪ್ರೀಂ ಕೋರ್ಟ್‌ಗೆ ತಮ್ಮ ಶಿಕ್ಷೆಯನ್ನು ತಡೆಯುವಂತೆ ಒತ್ತಾಯಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications