ಮೋದಿ ಉಪನಾಮ ಪ್ರಕರಣ: ಶಿಕ್ಷೆಗೆ ತಡೆ ಕೋರಿದ್ದ ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್ ಕೋರ್ಟ್
ಅಹಮದಾಬಾದ್, ಏಪ್ರಿಲ್. 20: ಕರ್ನಾಟಕದಲ್ಲಿ ಪ್ರಧಾನಿ ಮೋದಿ ಕುರಿತು ಮಾಡಿದ್ದ 'ಮೋದಿ ಉಪನಾಮ' ಟೀಕೆಗೆ ಸಂಬಂಧಿಸಿದಂತೆ 2019 ರ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ಕೋರ್ಟ್ ತಿರಸ್ಕರಿಸಿದೆ.
2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಂಸತ್ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾದ ತಮ್ಮ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ನ ಸೂರತ್‌ನ ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ.

ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಳೆದ ಮಾರ್ಚ್ 23 ರಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಮೂವತ್ತು ದಿನಗಳ ಕಾಲ ಶಿಕ್ಷೆಯನ್ನು ಅಮಾನತು ಮಾಡಿತ್ತು. ಮರುದಿನ ಮಾರ್ಚ್ 24 ರಂದು ಕೇರಳದ ವಯನಾಡ್ ಸಂಸದರಾಗಿದ್ದ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಯಿತು.
2019 ರಲ್ಲಿ ಕರ್ನಾಟಕ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ, ರಾಹುಲ್ ಗಾಂಧಿ ಮೋದಿ ಉಪನಾಮವನ್ನು ವ್ಯಂಗ್ಯವಾಡಿದ್ದರು. "ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೇಗೆ ಇಟ್ಟುಕೊಂಡಿದ್ದಾರೆ" ಎಂದು ಪ್ರಶ್ನಿಸಿದ್ದರು. ಇದಕ್ಕೆ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು.
Gujarat | Surat Court rejects the application filed by Congress leader Rahul Gandhi seeking stay on his conviction in the 2019 defamation case on 'Modi surname' remark. pic.twitter.com/BMVyXTkAs7
— ANI (@ANI) April 20, 2023
ಏಪ್ರಿಲ್ 3 ರಂದು, ರಾಹುಲ್ ಗಾಂಧಿಯವರು ಮ್ಯಾಜಿಸ್ಟ್ರೇಟ್ ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ಮೇಲ್ಮನವಿಯನ್ನು ಸಲ್ಲಿಸಿದರು. ನಂತರ ಅವರ ಮನವಿ ಇತ್ಯರ್ಥವಾಗುವವರೆಗೆ ಅವರಿಗೆ ಜಾಮೀನು ನೀಡಲಾಯಿತು. ತನ್ನ ಸಂಸದ ಸ್ಥಾನದ ಅನರ್ಹತೆಯು ತನಗೆ ತುಂಬಲಾಗದ ನಷ್ಟ ಮತ್ತು ಆರದ ಗಾಯವನ್ನು ಉಂಟುಮಾಡಿದೆ ಎಂದು ರಾಹುಲ್ ಗಾಂಧಿಯವರು ಕಳೆದ ಗುರುವಾರ ಸೆಷನ್ಸ್ ನ್ಯಾಯಾಲಯಕ್ಕೆ ತಿಳಿಸಿದ್ದರು.
ದೋಷಾರೋಪಣೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಉನ್ನತ ನ್ಯಾಯಾಲಯವು ರಾಹುಲ್ ಗಾಂಧಿಯವರ ಕೇಸ್ ಅನ್ನು ರದ್ದುಗೊಳಿಸಿದರೆ ಅಥವಾ ಅವರ ಶಿಕ್ಷೆಯನ್ನು ಎರಡು ವರ್ಷಗಳಿಗಿಂತಲೂ ಕಡಿಮೆಗೊಳಿಸಿದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು.
ಅರ್ಜಿ ತಿರಸ್ಕೃತವಾಗಿರುವ ಹಿನ್ನೆಲೆ ಇದರರ್ಥ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಸದಸ್ಯರನ್ನಾಗಿ ಮತ್ತೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಸಂಸದ ಸ್ಥಾನದಿಂದ ಅನರ್ಹರಾದ ನಂತರ ವಿಚಾರಣಾ ನ್ಯಾಯಾಲಯವು ತನ್ನನ್ನು ಒರಟಾಗಿ ನಡೆಸಿಕೊಂಡಿದೆ ಎಂದು ರಾಹುಲ್ ಗಾಂಧಿ ಈ ಹಿಂದೆ ಹೇಳಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications