ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

|
Google Oneindia Kannada News

ನವದೆಹಲಿ, ಜುಲೈ 02: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮೂಲಕ ಎರಡನೇ ಬಾರಿಗೆ ಅಧಿಕಾರ ಸ್ಥಾಪಿಸಿರುವ ಮೋದಿ -ಅಮಿತ್ ಶಾ ಜೋಡಿ ಈಗ ಪಕ್ಷದ ಸದಸ್ಯತ್ವ ಅಭಿಯಾನಯತ್ತ ಹೆಚ್ಚಿನ ಗಮನ ಹರಿಸಿದೆ. ಜುಲೈ 6 ರಿಂದ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ. ಸದಸ್ಯತ್ವ ಅಭಿಯಾನಕ್ಕೆ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ.

ಜುಲೈ 6ರಂದು ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನ. ಅಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಸಿಗಲಿದ್ದು, ಆಗಸ್ಟ್ 11ರಂದು ಅಭಿಯಾನ ಪೂರ್ಣಗೊಳ್ಳಲಿದೆ. ಜೂನ್ 24ರೊಳಗೆ ರಾಜ್ಯಮಟ್ಟದ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ನಡೆಸಲು ರಾಜ್ಯ ಘಟಕಗಳಿಗೆ ಸೂಚಿಸಲಾಗಿದೆ. ಬಿಜೆಪಿ ಸದಸ್ಯರ ಸಂಖ್ಯೆಯನ್ನು ಶೇ20ರಷ್ಟು ಹೆಚ್ಚಳ ಮಾಡುವಂತೆ ಅಮಿತ್ ಶಾ ಅವರು ಗುರಿ ನೀಡಿದ್ದಾರೆ.

ಅಮಿತ್ ಶಾ ರಾಜ್ಯಭಾರ 3 ರಾಜ್ಯಗಳ ಚುನಾವಣೆ ಮುಗಿಯುವ ತನಕ? ಅಮಿತ್ ಶಾ ರಾಜ್ಯಭಾರ 3 ರಾಜ್ಯಗಳ ಚುನಾವಣೆ ಮುಗಿಯುವ ತನಕ?

ಕರ್ನಾಟಕದಲ್ಲಿ ಕಳೆದ ವರ್ಷ 80 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿತ್ತು. ಈ ವರ್ಷ 50 ಲಕ್ಷ ಸದಸ್ಯರನ್ನು ಸೇರ್ಪಡೆ ಮಾಡುವ ಗುರಿ ಹೊಂದಲಾಗಿದೆ. ಪಕ್ಷದ ಮಾಹಿತಿ ತಂತ್ರಜ್ಞಾನ ವಿಭಾಗ ಸಕ್ರಿಯವಾಗಿದ್ದು, ಈ ಗುರಿಯನ್ನು ತಲುಪುತ್ತೇವೆ' ಎಂದು ಯಡಿಯೂರಪ್ಪ ಹೇಳಿದರು.

Modi to launch BJPs membership drive from Varanasi on July 6

ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನದ ಹೊಣೆಯನ್ನು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಅಧ್ಯಕ್ಷ ಅಮಿತ್ ಶಾ ನೀಡಿದ್ದಾರೆ. ಬಿಜೆಪಿಯಲ್ಲಿ ಉಪಾಧ್ಯಕ್ಷ ಸ್ಥಾನ ಹೊಂದಿರುವ ಶಿವರಾಜ್ ಸಿಂಗ್ ಅವರಿಗೆ ಸಹಾಯಕರಾಗಿ ಹಲವು ಪದಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.

ಗಿಡ ನೆಡುವ ಕಾರ್ಯಕ್ರಮ: ಪ್ರತಿ ಬೂತ್ ಗಳಲ್ಲೂ ಕನಿಷ್ಠ 5 ಗಿಡ ನೆಡುವ ಕಾರ್ಯಕ್ರಮಕ್ಕೂ ಮೋದಿ ಅವರು ಚಾಲನೆ ನೀಡಿದ್ದಾರೆ. ವಾರಣಾಸಿಯಲ್ಲಿ ಮೋದಿ, ತೆಲಂಗಾಣದಲ್ಲಿ ಅಮಿತ್ ಶಾ ಅವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

English summary
Prime Minister Narendra Modi will launch the BJP's membership drive from Varanasi on July 6 during which, he told party workers, at least five trees should be planted in every booth across the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X