Modi Viral Video: ಫೇಸ್‌ಬುಕ್‌ನಿಂದ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಡಿಲೀಟ್ ಮಾಡಿದ್ದು ತಪ್ಪಾಯ್ತು ಎಂದ ಮೆಟಾ!
Modi Viral Video: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೇಸ್‌ಬುಕ್‌ನಲ್ಲಿ ಮಾಡಿದ್ದ ವಿಡಿಯೋವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೆಟಾ ಸರ್ಕಾರದ ಕ್ಷಮೆಯಾಚನೆ ಮಾಡಿದೆ. ಫೇಸ್‌ಬುಕ್‌ನಲ್ಲಿ ಸೃಷ್ಟಿಯಾಗಿದ್ದ ತಾಂತ್ರಿಕ ದೋಷದಿಂದಾಗಿ ವಿಡಿಯೋವನ್ನು ತೆಗೆದು ಹಾಕಲಾಗಿತ್ತು ಎಂದು ಮೆಟಾ ಹೇಳಿರುವುದಾಗಿ ವರದಿಯಾಗಿದೆ. ವಿಷಯವನ್ನು ತಪ್ಪಾಗಿ ತೆಗೆದುಹಾಕಲಾಗಿದೆ ಮತ್ತು ನಂತರ ಅದನ್ನು ಮತ್ತೆ ಸರಿಪಡಿಸಲಾಗಿದೆ ಎಂದೂ ಮೆಟಾದ ಅಧಿಕಾರಿಗಳು ಹೇಳಿದ್ದಾರೆ. ಮೂಲಗಳ ಪ್ರಕಾರ, ಸರ್ಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಮೆಟಾದ ವಿವರಣೆ ಮತ್ತು ವೀಡಿಯೊ ತೆಗೆದುಹಾಕಲು ಕಾರಣವಾದ ಸಂದರ್ಭಗಳನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ.
ಮುಂದುವರಿದು ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವನ್ನು ತೆಗೆದಿರುವುದಕ್ಕೆ ಸಂಬಂಧಿಸಿದಂತೆ ಮೆಟಾದಿಂದ ಅಧಿಕಾರಿಗಳು ವಿಚಾರಣೆಗೆ ಆಹ್ವಾನಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಕ್ಕಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾ ಮತ್ತು ಇನ್‌ಸ್ಟಾಗ್ರಾಮ್‌ನ ಜಾಗತಿಕ ಮುಖ್ಯಸ್ಥರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.

Modi Viral Video: ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು
ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 23 ರಂದು ಅಪ್‌ಲೋಡ್ ಮಾಡಲಾದ ವೀಡಿಯೊದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಸಂದೇಶವಿತ್ತು. ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಿಭಾಯಿಸಲು ಸರ್ಕಾರ ಕಠಿಣ ಕ್ರಮಗಳನ್ನು ಘೋಷಿಸಲಿದೆ ಎಂದು ಹೇಳಿದ್ದರು. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದರು.
ಅದರಲ್ಲಿ ಕೇಂದ್ರ ಸಚಿವ ಸಂಪುಟದ ಮುಂದೆ ಕಠಿಣ ಕಾನೂನು ನಿಬಂಧನೆಗಳನ್ನು ತರಲಾಗುವುದು ಎನ್ನುವ ಅಂಶವೂ ಇತ್ತು. ಅಲ್ಲದೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಠಿಣ ಶಿಕ್ಷೆ ಮತ್ತು ವಿಶೇಷ ನ್ಯಾಯಾಲಯಗಳನ್ನು ಪ್ರಸ್ತಾಪಿಸುವ ಕರಡು ಕಾನೂನನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ಸಚಿವ ಸಂಪುಟದ ಮುಂದೆ ಇರಿಸಲಾಗುವುದು ಎಂದೂ ಹೇಳಲಾಗಿತ್ತು.
ಈ ವಿಡಿಯೋದಲ್ಲಿ ಸುಮಾರು 22 ಲಕ್ಷ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಖಚಿತಪಡಿಸಿದೆ ಎಂದು ಪ್ರಧಾನಿ ಹೇಳಿದ್ದರು. "ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೇನೂ ಮುಖ್ಯವಲ್ಲ" ಎಂದೂ ಮೋದಿ ಆ ವಿಡಿಯೋದಲ್ಲಿ ಉಲ್ಲೇಖಿಸಿದ್ದರು.
Modi Viral Video: ತಪ್ಪೊಪ್ಪಿಕೊಂಡ ಮೆಟಾ
ಇನ್ನು ನರೇಂದ್ರ ಮೋದಿ ಅವರ ನೀಟ್ ವಿಡಿಯೋ ಫೇಸ್‌ಬುಕ್‌ನಿಂದ ಸ್ವಲ್ಪ ಸಮಯದವರೆಗೆ ಕಣ್ಮರೆಯಾದ ನಂತರ ಕೇಂದ್ರ ಸರ್ಕಾರವು ಮೆಟಾಗೆ ಸಮನ್ಸ್ ಜಾರಿ ಮಾಡಿತ್ತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಕುರಿತು GenZಗಳನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಸೆಲ್ಫಿ ವಿಡಿಯೋವನ್ನು "ದೋಷ"ದ ಕಾರಣದಿಂದ ಸಂಕ್ಷಿಪ್ತವಾಗಿ ತೆಗೆದುಹಾಕಲಾಗಿದೆ ಎಂದು ಮೆಟಾ ಮಂಗಳವಾರ ಒಪ್ಪಿಕೊಂಡಿದೆ.
ತಡರಾತ್ರಿಯ ವೀಡಿಯೊ ಸಂದೇಶದಲ್ಲಿ, ಪ್ರಧಾನಿಯವರು ಕೇಂದ್ರ ಸಚಿವ ಸಂಪುಟವು ಈ ಕಠಿಣ ಕ್ರಮಗಳನ್ನು ಸಂಸತ್ತಿನಲ್ಲಿ ಚರ್ಚಿಸುತ್ತದೆ ಮತ್ತು ಸರ್ಕಾರ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದ್ದರು. ನೀಟ್ ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಆ ಸಮಯದಲ್ಲಿ ನಡೆದ ಬೃಹತ್ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಅವರ ವಿಡಿಯೋ ವೈರಲ್ ಆಗಿತ್ತು.


Click it and Unblock the Notifications
