ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲು ಮಾಧ್ಯಮಗಳೊಂದಿಗೆ ಮೋದಿ ಮಾತು

|
Google Oneindia Kannada News

ನವದೆಹಲಿ ಡಿಸೆಂಬರ್ 6: ಈ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನ ಅತ್ಯಂತ ಮಹತ್ವದ್ದಾಗಿದೆ. ಮುಂಬರುವ ಲೋಕಸಭೆ ಚುನಾವಣೆಗಳ ದೃಷ್ಟಿಯಿಂದ, ಇದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳಿಗೆ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಅಧಿವೇಶನದ ಮೊದಲ ದಿನ ಮಾಧ್ಯಮಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಣದುಬ್ಬರ, ಇಡಬ್ಲ್ಯೂಎಸ್ ಕೋಟಾ, ನಿರುದ್ಯೋಗದಂತಹ ವಿಷಯಗಳು ಪ್ರಮುಖವಾಗಿವೆ. ಅದರ ಮೇಲೆ ಪ್ರತಿಪಕ್ಷಗಳು ಪ್ರಸ್ತುತ ಸರ್ಕಾರವನ್ನು ಪ್ರಶ್ನಿಸಲು ಸಜ್ಜಾಗುತ್ತಿವೆ. ಈ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ದೃಷ್ಟಿಕೋನವನ್ನು ಸ್ಪಷ್ಟಪಡಿಸಲು ಮತ್ತು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಲು ಪ್ರಧಾನಿ ಚಳಿಗಾಲದ ಅಧಿವೇಶನದ ಆರಂಭ ದಿನ ಮಾಧ್ಯಮಗಳ ಮುಂದೆ ಬರಬಹುದು. ಈ ಕುರಿತು ಲೋಕಸಭೆಯ ಸಚಿವಾಲಯದಿಂದ ಪ್ರಕಟಣೆ ಹೊರಡಿಸಲಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು ಪ್ರಧಾನಿ ಮೋದಿ ಮಾಧ್ಯಮಗಳೊಂದಿಗೆ ಮಾತನಾಡಬಹುದು ಎಂದು ಅದರಲ್ಲಿ ಹೇಳಲಾಗಿದೆ.

Modi will addresses the media on the first day of the winter session of Parliament

ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಬಾರಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಒಟ್ಟು 16 ಹೊಸ ಮಸೂದೆಗಳು, ಟ್ರೇಡ್ ಮಾರ್ಕ್ (ತಿದ್ದುಪಡಿ) ಮಸೂದೆ, 2022, ಮತ್ತು ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಲಾಗುತ್ತದೆ.

Modi will addresses the media on the first day of the winter session of Parliament

ಕೆಲವು ಮಸೂದೆಗಳನ್ನು ಈಗಾಗಲೇ ಸದನಗಳಲ್ಲಿ ಅಂಗೀಕರಿಸಲಾಗಿದೆ ಅಥವಾ ಸಂಸದೀಯ ಸಮಿತಿಗಳು ಪರಿಶೀಲಿಸಿವೆ. ಚಳಿಗಾಲದ ಅಧಿವೇಶನವು ಡಿಸೆಂಬರ್ 29, 2022ರವರೆಗೆ ಇರಲಿದ್ದು, ಒಟ್ಟು 17 ಕೆಲಸದ ದಿನಗಳು ಇರುತ್ತವೆ.

English summary
Modi will address the media on the first day of the winter session of Parliament.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X