Breaking: ಎಫ್‌ಐಆರ್‌ ರದ್ದತಿ, ಮತ್ತೆ ಸುಪ್ರೀಂ ಮೊರೆ ಹೋದ ಜುಬೇರ್

ನವದೆಹಲಿ, ಜುಲೈ 18: ಫ್ಯಾಕ್ಟ್ ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್, ತಮ್ಮ ವಿರುದ್ಧ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಸೋಮವಾರ ಸುಪ್ರೀಂಕೋರ್ಟ್‌ ಮನವಿ ಮಾಡಿದ್ದಾರೆ.

ಪತ್ರಕರ್ತ ಮೊಹಮ್ಮದ್ ಜುಬೇರ್ ವಿರುದ್ಧ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ, ಭಾವನೆಗಳನ್ನು ಕೆರಳಿಸುವ ಆರೋಪದ ಮೇಲೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

'ಅರ್ಜಿದಾರರು ಹಲವಾರು ಎಫ್‌ಐಆರ್‌ಗಳ್ನು ಎದುರಿಸುತ್ತಿದ್ದು ಅವರ ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿದೆ' ಎಂದು ಮೊಹಮ್ಮದ್ ಜುಬೇರ್ ಅವರ ವಕೀಲರಾದ ವೃಂದಾ ಗ್ರೋವರ್ ಸಲ್ಲಿಸಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ನೇತೃತ್ವದ ಪೀಠ ಗಮನಿಸಿದೆ. "ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಪೀಠದ ಮುಂದೆ ಈ ಅರ್ಜಿಯನ್ನು ಪ್ರಸ್ತಾಪಿಸಬಹುದು" ಎಂದು ಪೀಠ ಸೂಚನೆ ನೀಡಿದೆ.

Mohammed Zubair seeks urgent hearing in Supreme Court on his plea against FIRs

ಮೊಹಮ್ಮದ್ ಜುಬೇರ್ ಅವರು ಸಲ್ಲಿಸಿರುವ ಹೊಸ ಮನವಿಯಲ್ಲಿ, ಆರು ಪ್ರಕರಣಗಳ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ಕೂಡ ಪ್ರಶ್ನಿಸಿದೆ.

Recommended Video

      England ವಿರುದ್ಧ ಚಕ್ರವ್ಯೂಹ ರಚಿಸಿದ Kohli ಹಾಗು Siraj *Cricket | OneIndia Kannada

      ಪತ್ರಕರ್ತ ಮೊಹಮ್ಮದ್ ಜುಬೇರ್ ವಿರುದ್ಧ ಸೀತಾಪುರ್, ಲಖಿಂಪುರ ಖೇರಿ, ಗಾಜಿಯಾಬಾದ್, ಮುಜಾಫರ್‌ನಗರ ಮತ್ತು ಹತ್ರಾಸ್ ಜಿಲ್ಲೆಗಳಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

      ಇನ್ನು, ಮೊಹಮ್ಮದ್ ಜುಬೈರ್ ಅವರ ವಿರುದ್ಧ ಉತ್ತರಪ್ರದೇಶದಲ್ಲಿ ದಾಖಲಾಗಿರುವ ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಜುಲೈ 20ರ ವರೆಗೆ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಯುಪಿ ಪೊಲೀಸರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+