ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವತ್‌ಗೆ ಜಾಮೀನು
ಮುಂಬೈ
ನವೆಂಬರ್ 9: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿದ್ದ ಶಿವಸೇನಾ ನಾಯಕ ಸಂಜಯ್ ರಾವತ್‌ಗೆ ಜಾಮೀನು ಸಿಕ್ಕಿದೆ. ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಬುಧವಾರ ಜಾಮೀನು ಪಡೆದಿದ್ದಾರೆ. ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಏಪ್ರಿಲ್‌ನಿಂದ ಜೈಲಿನಲ್ಲಿದ್ದರು. id="toptextpromo"> id='are-slot-1' class='oiad oi-axt oiadv'>id='top-searched-articles'>
ಗೋರೆಗಾಂವ್
ಪ್ರದೇಶದಲ್ಲಿನ ಪತ್ರ ಚಾಲ್ (ಸಾಲು ವಠಾರ) ಮರು ಅಭಿವೃದ್ಧಿಗೆ ಸಂಬಂಧಿಸಿದ ಹಣಕಾಸು ಅಕ್ರಮಗಳಲ್ಲಿ ರಾವತ್ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರನ್ನು ಬಂಧಿಸಿತ್ತು. ಈಗ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದರು. ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಅವರನ್ನು ಇರಿಸಲಾಗಿದೆ. ಕಳೆದ ತಿಂಗಳು ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು, ಇದನ್ನು ಇಡಿ ವಿರೋಧಿಸಿತ್ತು.











Click it and Unblock the Notifications