ಜೂನ್ 3ರಂದು ಮುಂಗಾರು ಪ್ರವೇಶಕ್ಕೆ ವಾತಾವರಣ ಪಕ್ಕಾ

ನವದೆಹಲಿ, ಜೂನ್ 02: ಗುರುವಾರ ನೈಋತ್ಯ ಮುಂಗಾರು ಪ್ರವೇಶಕ್ಕೆ ಕೇರಳದಲ್ಲಿ ವಾತಾವರಣ ಪಕ್ವವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ವರ್ಷ ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆನಂತರ ಎರಡು ದಿನ ಮುಂಗಾರು ವಿಳಂಬವಾಗುತ್ತದೆ. ನಾಲ್ಕು ದಿನ ವ್ಯತ್ಯಾಸವೂ ಆಗಬಹುದು ಎಂದು ತಿಳಿಸಿತ್ತು.

ಬುಧವಾರ ಮಾಹಿತಿ ನೀಡಿದ್ದು, ಅರಬ್ಬಿ ಸಮುದ್ರದ ಆಗ್ನೇಯದಲ್ಲಿ ಹಾಗೂ ಕೇರಳ ಕರಾವಳಿ ಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

Monsoon In Kerala On June 3: Conditions Ripe Enough Says IMD

ಜೂನ್ 1ರಂದು ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಈ ಬಾರಿ ತಡವಾಗಿದ್ದು, ಜೂನ್ 3ಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ತಿಳಿಸಿತ್ತು.

ಈ ವರ್ಷದ ನೈಋತ್ಯ ಮುಂಗಾರಿನ ಎರಡನೇ ದೀರ್ಘ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬಿಡುಗಡೆಗೊಳಿಸಿದೆ. ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿಯಲ್ಲಿರಲಿದ್ದು ಕೇಂದ್ರ ಭಾಗದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತ ಪೂರ್ವ ಭಾಗದಲ್ಲಿ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ತಿಳಿಸಿತ್ತು.

ನೈಋತ್ಯ ಮುಂಗಾರಿನ ಕಾಲಾವಧಿಯಲ್ಲಿ (ಜೂನ್‌ನಿಂದ-ಸೆಪ್ಟೆಂಬರ್) ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯ ಪ್ರಮಾಣದಲ್ಲಿ ಇರಲಿದೆ. 96-104 ಶೇಕಡಾ ಪ್ರಮಾಣದ ಮಳೆಯಾಗಬಹುದು. ದೀರ್ಘಾವಧಿಯ ಸರಾಸರಿಯಲ್ಲಿ ಮಳೆಯ ಪ್ರಮಾಣ ನೈಋತ್ಯ ಮುಂಗಾರಿನಲ್ಲಿ 101 ಶೇಕಡ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಮೃತ್ಯುಂಜಯ ಮೋಹಪತ್ರ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+