• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಮುಂದಿನ 5 ದಿನಗಳವರೆಗೆ ಅಧಿಕ ಮಳೆ: ಇತರ ರಾಜ್ಯಗಳ ಸ್ಥಿತಿಗತಿ ತಿಳಿಯಿರಿ

|
Google Oneindia Kannada News

ನವದೆಹಲಿ ಸೆಪ್ಟೆಂಬರ್ 19: ಭಾರಿ ಮಳೆಯಿಂದಾಗಿ ದೇಶದ ಹಲವು ರಾಜ್ಯಗಳು ಜರ್ಜರಿತವಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ ಮತ್ತೊಮ್ಮೆ ಮುಂಗಾರು ಚುರುಕಾಗಿದೆ. ಇಲ್ಲಿಯವರೆಗೂ ದೆಹಲಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೂ ಇದೀಗ ಮುಂಗಾರು ಕೊನೆಯ ಹಂತದಲ್ಲಿರುವುದರಿಂದ ಇಲ್ಲಿ ಚುರುಕುಗೊಂಡಿದೆ. ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ನವೀಕರಣದಲ್ಲಿ ತಿಳಿಸಿದೆ. ಇದರಿಂದ ದೆಹಲಿಯಲ್ಲಿ ಐದು ದಿನಗಳ ಕಾಲ ಅಧಿಕ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ಐದು ದಿನಗಳ ಕಾಲ ದೆಹಲಿಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 26 ಡಿಗ್ರಿಗಳಿದ್ದರೂ, ಈ ಇಡೀ ವಾರ ದೆಹಲಿ-ಎನ್‌ಸಿಆರ್‌ನಲ್ಲಿ ವರುಣ ದಯೆ ತೋರಲಿದ್ದಾನೆ. ಹೀಗಾಗಿ ಹವಾಮಾನ ಇಲಾಖೆ ಇಲ್ಲಿ ಎಚ್ಚರಿಕೆ ನೀಡಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮಳೆ

ಕರ್ನಾಟಕ, ತಮಿಳುನಾಡು, ತೆಲಂಗಾಣ ಮಳೆ

ದೆಹಲಿ ಹೊರತುಪಡಿಸಿ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಒಡಿಶಾದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ ಮತ್ತು ಮಹಾರಾಷ್ಟ್ರ ಹಾಗೂ ದಕ್ಷಿಣದಲ್ಲೂ ಮಳೆಯಾಗುವ ಸಾಧ್ಯತೆಗಳು ಇವೆ. ದಕ್ಷಿಣದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ತಮಿಳುನಾಡು, ತೆಲಂಗಾಣದಲ್ಲೂ ಲಘು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 21ರವರೆಗೆ ಮಳೆ

ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 21ರವರೆಗೆ ಮಳೆ

ಹೀಗಾಗಿ ಒಡಿಶಾದಲ್ಲಿ ಮುಂದಿನ ಕೆಲ ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಟಕ್, ಖುರ್ದಾ, ಪುರಿ, ಜಗತ್‌ಸಿಂಗ್‌ಪುರ, ಗಂಜಾಂ, ಗಜಪತಿ, ಕಲಹಂಡಿ, ಕೇಂದ್ರಪಾರ ಮತ್ತು ಕಂಧಮಾಲ್ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 21ರವರೆಗೆ ಅಧಿಕ ಮಳೆಯಾಗಬಹುದು. ನಿನ್ನೆಯಿಂದ ಆಳ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಹವಾಮಾನ ಇಲಾಖೆ ತಡೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ದೆಹಲಿಯಲ್ಲಿ ಮಳೆ

ಮುಂದಿನ 24 ಗಂಟೆಗಳಲ್ಲಿ ದೆಹಲಿಯಲ್ಲಿ ಮಳೆ

ಆದರೆ, ಖಾಸಗಿ ಹವಾಮಾನ ಮಾಹಿತಿ ಸಂಸ್ಥೆಯಾದ ಸ್ಕೈಮೆಟ್ ಪ್ರಕಾರ, ಇಂದು ಮತ್ತು ನಾಳೆ ಹಲವೆಡೆ ಭಾರೀ ಮಳೆಯಾಗಬಹುದು. ಮುಂದಿನ 24 ಗಂಟೆಗಳಲ್ಲಿ ದೆಹಲಿ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಈಶಾನ್ಯ ಭಾರತ, ಗಂಗಾನದಿ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾದ ಉಳಿದ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಗೋವಾ, ಗುಜರಾತ್, ಮಹಾರಾಷ್ಟ್ರ ಮಳೆ ಸಾಧ್ಯತೆ

ಗೋವಾ, ಗುಜರಾತ್, ಮಹಾರಾಷ್ಟ್ರ ಮಳೆ ಸಾಧ್ಯತೆ

ಛತ್ತೀಸ್‌ಗಢ, ಕೊಂಕಣ-ಗೋವಾ, ಗುಜರಾತ್, ಮಹಾರಾಷ್ಟ್ರ, ವಿದರ್ಭ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಉತ್ತರ ಪ್ರದೇಶ, ಮಧ್ಯಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

English summary
Many states of the country are battered due to heavy rains. On the other hand, monsoon is brisk again in Delhi. Know the status of other states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X