ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಸರಾಸರಿಗಿಂತಲೂ ಅಧಿಕ ಮಳೆ, ಈ ಬಾರಿ ಉತ್ತಮ ಮುಂಗಾರು

|
Google Oneindia Kannada News

ನವದೆಹಲಿ, ಜೂನ್ 1: ದೇಶದಲ್ಲಿ ಸರಾಸರಿಗಿಂತಲೂ ಈ ಬಾರಿ ಮಳೆ ಬೀಳಲಿದೆ, ಉತ್ತಮ ಮುಂಗಾರು ನಿರೀಕ್ಷೆ ಇದೆ ಎಂದು ಭೂ ವಿಜ್ಞಾನ ಕಾರ್ಯದರ್ಶಿ ಡಾ. ಮಾಧವನ್ ನಾಯರ್ ರಾಜೀವನ್ ತಿಳಿಸಿದ್ದಾರೆ.

ದೇಶದಲ್ಲಿ ಉತ್ತಮ ಮುಂಗಾರಿನ ಪರಿಸ್ಥಿತಿ ಇದ್ದು ಜೂನ್‌ನಿಂದ ಸೆಪ್ಟೆಂಬರ್ ನಡುವಿನ ಅವಧಿಯಲ್ಲಿ ಸರಾಸರಿಗಿಂತಲೂ 88 ಸೆಂ.ಮೀ ಅಧಿಕ ಮಳೆಯಾಗಲಿದೆ ಎಂದು ತಿಳಿಸಿದೆ.

ನಿಸರ್ಗ ಚಂಡಮಾರುತ: ಮಹಾರಾಷ್ಟ್ರ, ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆನಿಸರ್ಗ ಚಂಡಮಾರುತ: ಮಹಾರಾಷ್ಟ್ರ, ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಈ ಬಾರಿ ದೇಶದಲ್ಲಿ ಉತ್ತಮ ಮುಂಗಾರಿಗೆ ಪರಿಸ್ಥಿತಿಗಳು ಹೆಚ್ಚು ಅನುಕೂಲಕರಾವಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಪೂರ್ವ ಮಧ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಹವಾಮಾನ ವೈಪರೀತ್ಯಗಳು ಉಂಟಾಗಲಿವೆ ಎಂದಿದ್ದಾರೆ.

Monsoon Rain Between June-September Over Country To Be High

ಆಗ್ನೇಯ ಅರೇಬಿಯನ್ ಸಮುದ್ರ, ಲಕ್ಷದ್ವೀಪ ಪ್ರದೇಶ ಮತ್ತು ಕೇರಳ ಕರಾವಳಿಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮೀನುಗಾರರು ಯಾವುದೇ ಕಾರ್ಯಚಟುವಟಿಕೆ ಕೈಗೊಳ್ಳಬಾರದು ಎಂದು ಡಾ. ಮಾಧವನ್ ನಾಯರ್ ತಿಳಿಸಿದ್ದಾರೆ.

ಪೂರ್ವ ಮತ್ತು ಆಗ್ನೇಯ ಅರೇಬಿಯನ್ ಸಮುದ್ರ, ಕರ್ನಾಟಕ-ಗೋವಾ ತೀರಗಳಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಂಗಾರು ಈಗಾಗಲೇ ಕೇರಳವನ್ನು ಪ್ರವೇಶಿಸಿದ್ದು ಉತ್ತಮ ಮಳೆಯಾಗುತ್ತಿದೆ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

English summary
The Monsoon Rainfall between June And September over the Country Will be 102 percent of its long period average said the ministry of Earth Sciences on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X