Monsoon Rains: ಈ ಭಾಗಗಳಲ್ಲಿ ಮುಂದಿನ 4-5 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಆರ್ಭಟದ ಮುನ್ಸೂಚನೆ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಜೂನ್ 18ರ ವರೆಗೂ ಮಧ್ಯ, ಪೂರ್ವ ಭಾರತ ಮತ್ತು ವಾಯುವ್ಯ ಭಾರತದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ನವದೆಹಲಿಗೆ ಜೂನ್ 30ರ ವೇಳೆಗೆ ಮುಂಗಾರು ಎಂಟ್ರಿ ಕೊಡುವ ಮುನ್ಸೂಚನೆ ಇತ್ತು. ಆದರೆ ಅದಕ್ಕೂ ಮುಂಚೆ ಅಂದರೆ ಜೂನ್ 19 ಮತ್ತು 25ರ ನಡುವೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವರ್ಷ ಭಾರತದ ಹಲವು ಭಾಗಗಳಲ್ಲಿ ಅವಧಿಗೂ ಮೊದಲೇ ಮುಂಗಾರು ಆವರಿಸಿಬಿಟ್ಟಿದೆ. ಸಾಮಾನ್ಯವಾಗಿ ಕರ್ನಾಟಕಕ್ಕೆ ಜೂನ್ 1ರ ಬಳಿಕ ಆಗಮಿಸುತ್ತಿತ್ತು. ಆದರೆ ಈ ಬಾರಿ ಅವಧಿಗೂ ಮುನ್ನವೇ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ಮೊದಲು ಕೇರಳಕ್ಕೆ ಮೇ 24ರಿಂದಲೇ ಎಂಟ್ರಿ ಕೊಟ್ಟಿದ್ದು, ಬಳಿಕ ಕರ್ನಾಟಕಕ್ಕೆ ಆಗಮಿಸಿತು.

ಎಲ್ಲೆಲ್ಲಿ ಮಳೆ?: ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ಮುಂಗಾರು ಮಳೆ ಆರ್ಭಟ ತಗ್ಗಿದ್ದು, ಇದೀಗ ಮತ್ತೆ ಆರ್ಭಟ ಶುರು ಮಾಡಿದೆ. ಕೇರಳ, ತಮಿಳುನಾಡು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ರಣಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕೈದು ದಿನ ಈ ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಎರಡನೇ ಹಂತದ ಮಾನ್ಸೂನ್ ಮುಂದಿನ ವಾರದೊಳಗೆ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್ ಮತ್ತು ಪೂರ್ವ ಉತ್ತರ ಪ್ರದೇಶಗಳಿಗೆ ಎಂಟ್ರಿ ಕೊಡಲಿದೆ. ಪರಿಣಾಮ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿಯಲ್ಲಿ ಭಾರೀ ಮಳೆ: ಕಳೆದ ಒಂದು ವಾರದಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಾಪಮಾನ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇಂದು (ಜೂನ್‌ 15) ಬೆಳ್ಳಂಬೆಳಗ್ಗೆ ಮಳೆರಾಯ ತಂಪೆರೆದಿದ್ದಾನೆ. ಭಾನುವಾರ ಮುಂಜಾನೆಯಿಂದ ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿರುಗಾಳಿ ಸಹಿತ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಮನೆಯಲ್ಲೇ ಇರುವಂತೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಭಾನುವಾರ ಬೆಳಗ್ಗೆಯೇ ಭಾರೀ ಮಳೆಯಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಭಾನುವಾರ ಮುಂಜಾನೆ ನವದೆಹಲಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ಗಂಟೆಗೆ 80-100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಿರುವ ಬಗ್ಗೆ ವರದಿಯಾಗಿದೆ. ಬೆಳಗಿನ ಜಾವ 3:30 ರಿಂದ 4 ಗಂಟೆ ವರೆಗೂ ಸಫ್ದರ್ಜಂಗ್‌ನಲ್ಲಿ ಆಲಿಕಲ್ಲು ಮಳೆಯಾಗಿದ್ದು, ಗಂಟೆಗೆ 104 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಿದ ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿವೆ ಎಂದು ತಿಳಿದುಬಂದಿದೆ.

ಹಾಗೆಯೇ ನವದೆಹಲಿಯಲ್ಲಿ ಜೂನ್ 19ರ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+