Monsoon Rains: ಎಚ್ಚರ.. ಎಚ್ಚರ.. ಎಚ್ಚರ.. ಈ ಭಾಗಗಳಲ್ಲಿ ಮುಂದಿನ ಒಂದು ವಾರ ರಣಮಳೆ ಸುರಿಯುವ ಮುನ್ಸೂಚನೆ

IMD Weather Forecast: ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಹಲವೆಡೆ ಭಾರೀ ಮಳೆ ಆಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನೂ ಕೆಲವು ಭಾಗಗಳಲ್ಲಿ ಬಿಸಿಲಿನ ವಾತಾವರಣವೇ ಮುಂದುರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

Monsoon Rains Heavy rainfall forecast in These states for next one week from June 16

ಎಲ್ಲೆಲ್ಲಿ ಎಷ್ಟು ದಿನ ಮಳೆ?: ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಸೋಮವಾರ (ಜೂನ್ 16) ಕರಾವಳಿ ಕರ್ನಾಟಕ, ಕೇರಳ ಮತ್ತು ಗೋವಾದ ಕೆಲವು ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವ ಜನರು ಜಾಗರೂಕರಾಗಿರುವಂತೆಯೂ ಸೂಚನೆ ನೀಡಲಾಗಿದೆ.

ಛತ್ತೀಸ್‌ಗಢ, ಒಡಿಶಾ, ಉತ್ತರಾಖಂಡದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಿಗೆ ಇಂದು ಆರೆಂಜ್‌ ಅಲರ್ಟ್ ನೀಡಲಾಗಿದೆ. ಮುಂದಿನ ಒಂದು ವಾರದವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಇನ್ನು ಕೇರಳದಲ್ಲಿ ಭಾನುವಾರದಿಂದ ಹೆಚ್ಚಿನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, 6 ಜಿಲ್ಲೆಗಲಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 18ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಶಾಲೆಗಳಿಗೆ ರಜೆ ಘೋಷಣೆ?: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ರಾಜ್ಯದ ತ್ರಿಶೂರ್, ಪಾಲಕ್ಕಾಡ್, ಕಣ್ಣೂರು, ವಯನಾಡ್, ಮಲಪ್ಪುರಂ, ಕೊಟ್ಟಾಯಂ, ಕೋಝಿಕ್ಕೋಡ್, ಇಡುಕ್ಕಿ, ಎರ್ನಾಕುಲಂ, ಪತ್ತನಂತಿಟ್ಟ, ಆಲಪ್ಪುಳದಲ್ಲಿ, ಕುಟ್ಟನಾಡ್ ಮತ್ತು ಕಾಸರಗೋಡಿಲ್ಲಿ ಸೋಮವಾರ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಿರುವನಂತಪುರಂ, ಕೊಲ್ಲಂ ಮತ್ತು ಆಲಪ್ಪುಳದಲ್ಲಿ ಯಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೇರಳ ಮತ್ತು ಮಾಹೆಯ ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಬಿರುಸು ಪಡೆಯುವ ಮುನ್ಸೂಚನೆ ನೀಡಿದೆ. ಆದ್ದರಿಂದ ಜೂನ್ 18ರ ವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತೊಂದೆಡೆ ಭಾರೀ ಮಳೆ ಮುಂದುವರೆದ ಹಿನ್ನೆಲೆ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಣದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಊಟಿ, ಕುಂದ, ಗುಡಲೂರು ಮತ್ತು ಪಂದಲೂರು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ನವದೆಹಲಿ ಹವಾಮಾನ ವಿವರ: ದೆಹಲಿಯ ಕೆಲವು ಭಾಗಗಳಲ್ಲಿ ಭಾನುವಾರ ಬೆಳಗ್ಗೆ ಭಾರೀ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರ ಮನ ತಣ್ಣಗಾದಂತಾಗಿದೆ. ಇನ್ನು ಜೂನ್‌ 16 ಸೋಮವಾರ ಸಂಜೆ ವೇಳೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಿರುಗಾಳಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ವಾಯುವ್ಯ, ನೈಋತ್ಯ ಮತ್ತು ಆಗ್ನೇಯ ದೆಹಲಿಗೆ ಹವಾಮಾನ ಇಲಾಖೆ ಆರೆಂಜ್‌ ಅಜರ್ಟ್‌ ನೀಡಿದೆ.

ಭಾನುವಾರ (ಜೂನ್‌ 15) ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗರಿಷ್ಠ ತಾಪಮಾನ 41.8°C ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ ಸುಮಾರು 2 ಡಿಗ್ರಿ ಹೆಚ್ಚಾಗಿದೆ. ಇದಕ್ಕೂ ಮುಂಚೆ ನಿನ್ನೆ ಬೆಳಗ್ಗೆ 42 ಮಿಟರ್ ಮೀ ಮಳೆಯಾಗಿದೆ. ಸಫ್ದರ್ಜಂಗ್, ಲೋಧಿ ರಸ್ತೆ ಮತ್ತು ಪುಸಾದಂತಹ ಪ್ರಮುಖ ನಿಲ್ದಾಣಗಳಲ್ಲಿ 27-33.5 ಮಿಲಿ ಮೀಟರ್ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಸೋಮವಾರದ ತಾಪಮಾನವು 23°C ಮತ್ತು 37°C ವರೆಗೂ ದಾಖಲಾಗುವ ಸಾಧ್ಯತೆಯಿದೆ. ಈ ನಡುವೆಯೂ ಸಂಜೆ ವೇಳೆಗೆ ಮಳೆರಾಯನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಎಲ್ಲೆಲ್ಲಿ ಅಧಿಕ ತಾಪಮಾನ ದಾಖಲು?: ವಾರಣಾಸಿಯಲ್ಲಿ ಭಾರತದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಗರಿಷ್ಠ ತಾಪಮಾನ 43.2°C ದಾಖಲಾಗಿದೆ. ಘಾಜಿಪುರಲ್ಲೂ 40°C ದಾಟಿದೆ. ಪಂಜಾಬ್‌ನ ಬಟಿಂಡಾ, ಹರಿಯಾಣದ ಸಿರ್ಸಾ, ಮಧ್ಯಪ್ರದೇಶದ ಸಿಧಿ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ 41°C-42°C ವರೆಗೂ ತಾಪಮಾನವನ್ನು ದಾಖಲಾಗಿದ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+