ಅಧಿವೇಶನದ LIVE ಅಪ್ಡೇಟ್ಸ್ : ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಬಹುತೇಕ ಖಚಿತ
ನವದೆಹಲಿ, ಜೂನ್ 18: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ, ಮೋದಿ ಸರ್ಕಾರ್ 2 ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಸಂಸತ್ ಅಧಿವೇಶನ ಇಂದು ಆರಂಭಗೊಂಡಿದೆ. ಈ ದಿನದ ಅಪ್ಡೇಟ್ಸ್ ಇಲ್ಲಿದೆ
17ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ(ಜೂನ್ 17) ದಂದು ಆರಂಭಗೊಂಡಿದೆ. ಈ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಬಜೆಟ್, ತ್ರಿವಳಿ ತಲಾಕ್ ಸೇರಿದಂತೆ ಅನೇಕ ವಿಧೇಯಕಗಳ ಕುರಿತು ಚರ್ಚೆಯಾಗಲಿದೆ.
ಸಂಸತ್ ಕಲಾಪದ ಮೊದಲೆರಡು ದಿನಗಳಲ್ಲಿ 542 ನೂತನ ಸದಸ್ಯರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ನಂತರ ಲೋಕಸಭಾ ಸ್ಪೀಕರ್, ಉಪ ಸ್ಪೀಕರ್ ಆಯ್ಕೆಯಾಗಲಿದೆ.

ಲೋಕಸಭೆಯಲ್ಲಿ ಎರಡನೇ ಅವಧಿಗೆ ಪ್ರತಿಪಕ್ಷ ಇಲ್ಲದಂಥ ಪರಿಸ್ಥಿತಿ ಉಂಟಾಗಿದೆ. ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆಯಲ್ಲಿ ಶೇ.10 ಸೀಟು ಸಹ ಗೆಲ್ಲಲು ಕಾಂಗ್ರೆಸ್ಸಿಗೆ ಸಾಧ್ಯವಾಗಿಲ್ಲ.
52 ಸ್ಥಾನ ಗೆದ್ದಿರುವ ಕಾಂಗ್ರೆಸ್ಸಿಗೆ ಒಂದೆರಡು ಸ್ಥಾನಗಳ ಕೊರತೆ ಎದುರಾಗಿದೆ. ಜೊತೆಗೆ ಲೋಕಸಭೆ ನಾಯಕನ ಆಯ್ಕೆ ಗೊಂದಲವೂ ಕಾಂಗ್ರೆಸ್ಸಿಗೆ ಉಂಟಾಗಿದೆ.
















Click it and Unblock the Notifications