ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

ಅಧಿವೇಶನದ LIVE ಅಪ್ಡೇಟ್ಸ್ : ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಬಹುತೇಕ ಖಚಿತ

|
Google Oneindia Kannada News

ನವದೆಹಲಿ, ಜೂನ್ 18: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ, ಮೋದಿ ಸರ್ಕಾರ್ 2 ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಸಂಸತ್ ಅಧಿವೇಶನ ಇಂದು ಆರಂಭಗೊಂಡಿದೆ. ಈ ದಿನದ ಅಪ್ಡೇಟ್ಸ್ ಇಲ್ಲಿದೆ

 ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ಸಿನ ಲೋಕಸಭಾ ನಾಯಕ ಯಾರು? ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ಸಿನ ಲೋಕಸಭಾ ನಾಯಕ ಯಾರು?

17ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ(ಜೂನ್ 17) ದಂದು ಆರಂಭಗೊಂಡಿದೆ. ಈ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಬಜೆಟ್, ತ್ರಿವಳಿ ತಲಾಕ್ ಸೇರಿದಂತೆ ಅನೇಕ ವಿಧೇಯಕಗಳ ಕುರಿತು ಚರ್ಚೆಯಾಗಲಿದೆ.

ಪಂಚೆ, ಶಲ್ಯ ತೊಟ್ಟು ಸಂಸತ್ ಪ್ರವೇಶಿಸಿದ ತೇಜಸ್ವಿ ಸೂರ್ಯಪಂಚೆ, ಶಲ್ಯ ತೊಟ್ಟು ಸಂಸತ್ ಪ್ರವೇಶಿಸಿದ ತೇಜಸ್ವಿ ಸೂರ್ಯ

ಸಂಸತ್ ಕಲಾಪದ ಮೊದಲೆರಡು ದಿನಗಳಲ್ಲಿ 542 ನೂತನ ಸದಸ್ಯರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ನಂತರ ಲೋಕಸಭಾ ಸ್ಪೀಕರ್, ಉಪ ಸ್ಪೀಕರ್ ಆಯ್ಕೆಯಾಗಲಿದೆ.

Monsoon session 2019 : 17th Lok Sabha Parliament Live updates on June 17

ಲೋಕಸಭೆಯಲ್ಲಿ ಎರಡನೇ ಅವಧಿಗೆ ಪ್ರತಿಪಕ್ಷ ಇಲ್ಲದಂಥ ಪರಿಸ್ಥಿತಿ ಉಂಟಾಗಿದೆ. ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆಯಲ್ಲಿ ಶೇ.10 ಸೀಟು ಸಹ ಗೆಲ್ಲಲು ಕಾಂಗ್ರೆಸ್ಸಿಗೆ ಸಾಧ್ಯವಾಗಿಲ್ಲ.

ಕೇಂದ್ರ ಬಜೆಟ್ 2019 : ಮೋದಿ ಕನಸಿನ ಬಜೆಟ್ ವಿನ್ಯಾಸದಲ್ಲಿ ನಿರ್ಮಲಾ ಹಾಗೂ ತಂಡಕೇಂದ್ರ ಬಜೆಟ್ 2019 : ಮೋದಿ ಕನಸಿನ ಬಜೆಟ್ ವಿನ್ಯಾಸದಲ್ಲಿ ನಿರ್ಮಲಾ ಹಾಗೂ ತಂಡ

52 ಸ್ಥಾನ ಗೆದ್ದಿರುವ ಕಾಂಗ್ರೆಸ್ಸಿಗೆ ಒಂದೆರಡು ಸ್ಥಾನಗಳ ಕೊರತೆ ಎದುರಾಗಿದೆ. ಜೊತೆಗೆ ಲೋಕಸಭೆ ನಾಯಕನ ಆಯ್ಕೆ ಗೊಂದಲವೂ ಕಾಂಗ್ರೆಸ್ಸಿಗೆ ಉಂಟಾಗಿದೆ.

Newest FirstOldest First
1:09 PM, 17 Jun

ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮಾರ್, ಐಟಿ ಸಚಿವ ರವಿಶಂಕರ್ ಪ್ರಸಾದ್, ಎಚ್ ಆರ್ ಡಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಅರ್ಜುನ್ ಮುಂಡಾ, ಗಿರಿರಾಜ್ ಸಿಂಗ್, ಗಜೇಂದ್ರ ಸಿಂಗ್ ಶೇಖಾವತ್, ಸಂತೋಷ್ ಕುಮಾರ್ ಗಂಗ್ವಾರ್ ಅವರಿಂದ ಪ್ರಮಾಣ ವಚನ ಸ್ವೀಕಾರ
1:07 PM, 17 Jun

ಸಂಸತ್ ಮುಂದೆ ಪೋಸ್ ಕೊಟ್ಟ ಅಪ್ಪ -ಮಗ: ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಅವರ ಮಗ ಶ್ರೀಮಂತ ಸಂಸದ ನಕುಲ್ ನಾಥ್.
1:05 PM, 17 Jun

ಬ್ರಿಜ್ ಭೂಷಣ್ ಶರಣ್ ಸಿಂಗ್, ಬಿ ಮೆಹ್ತಾಬ್, ಶ್ರೀಪಾದ್ ನಾಯ್ಕ್, ಅಶ್ವಿನಿ ಛುಬೇ ಅವರು ಪ್ರಮಾಣ ವಚನ ಸ್ವೀಕರಿಸಿದರು.
12:17 PM, 17 Jun

ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಸಾರಂಗಿ
12:16 PM, 17 Jun

ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಲ್ಹಾದ್ ಜೋಶಿ.
12:15 PM, 17 Jun

ಕೇಂದ್ರ ಸಚಿವ, ಬಿಜೆಪಿ ಸಂಸದ ಡಾ. ಹರ್ಷ್ ವರ್ಧನ್ ಹಾಗೂ ಡಾ. ಜಿತೇಂದ್ರ ಪ್ರಸಾದ್ ಅವರು ಕ್ರಮವಾಗಿ ಸಂಸ್ಕೃತ ಹಾಗೂ ಡೊಗ್ರಿ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
12:15 PM, 17 Jun

ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ, ಭಾರತ್ ಮಾತಾ ಕೀ ಜೈ, ಮೋದಿ, ಮೋದಿ ಎಂದು ಹರ್ಷೋದ್ಗಾರ ಮಾಡಿದ ಬಿಜೆಪಿ ಸಂಸದರು
Advertisement
11:48 AM, 17 Jun

ಬಿಜೆಪಿ ಸಂಸದರಾದ ನಿತಿನ್ ಗಡ್ಕರಿ, ಹರ್ ಸಿಮ್ರತ್ ಕೌರ್, ಸ್ಮೃತಿ ಇರಾನಿ ಅವರಿಂದ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ.
11:48 AM, 17 Jun

ಮಧುಬನಿ ಕಲೆಯಿಂದ ತಯಾರಿಸಿದ ಟೋಪಿ ಹಾಗೂ ಉತ್ತರೀಯ ಧರಿಸಿ ಸಂಸತ್ತಿಗೆ ಬಂದ ಬಿಹಾರದ ಬಿಜೆಪಿ ಸಂಸದ ಡಾ. ಅಶೋಕ್ ಕುಮಾರ್ ಯಾದವ್
11:27 AM, 17 Jun

ಮೊದಲಿಗೆ ಸಂಸದರಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಕೇರಳದ ಕಾಂಗ್ರೆಸ್ ನಾಯಕ ಸುರೇಶ್ ಕೆ,
11:20 AM, 17 Jun

ಪ್ರತಿಪಕ್ಷಗಳು ಸದಸ್ಯ ಬಲದ ಸಂಖ್ಯೆ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ, ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಂಸತ್ ಪ್ರವೇಶಕ್ಕೂ ಮುನ್ನ ಪ್ರಧಾನಿ, ವಾರಣಾಸಿ ಸಂಸದ ನರೇಂದ್ರ ಮೋದಿ ಹೇಳಿದರು.
11:19 AM, 17 Jun

ಕಾಂಗ್ರೆಸ್ಸಿನ ಲೋಕಸಭೆ ನಾಯಕರು ಯಾರು? ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿ ಸೋಲು ಕಂಡಿರುವುದರಿಂದ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರು ಯಾರು ಎನ್ನುವ ಪ್ರಶ್ನೆ ಎದ್ದಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಅವರು ಸಂಸತ್ತಿನಲ್ಲಿ ನಾಯಕರಾಗಿ ನಿಲ್ಲಲು ಹಿಂದೇಟು ಹಾಕಿದ್ದಾರೆ. ಸದ್ಯಕ್ಕೆ ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ನಾಯಕರಾಗಿ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ರಾಜ್ಯಸಭೆಯಲ್ಲಿ ಗುಲಾಂನಬಿ ಆಜಾದ್ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ.
Advertisement
11:19 AM, 17 Jun

ಸಂಸದೀಯ ವ್ಯವಹಾರಗಳ ಸಚಿವರಾಗಿ, ಕರ್ನಾಟಕದ ಪ್ರಲ್ಹಾದ್ ಜೋಶಿ ಅವರಿಗೆ ಮಹತ್ವದ ಹೊಣೆ, ಈ ಬಗ್ಗೆ ಮಾತನಾಡಿದ ಅವರು, ಸರ್ವಪಕ್ಷಗಳೊಂದಿಗಿನ ಸಭೆ ಯಶಸ್ವಿಯಾಗಿದ್ದು, ಸುಗಮ ಕಲಾಪಕ್ಕೆ ಸಹಕಾರ ನೀಡುವ ವಿಶ್ವಾಸವಿದೆ. ಜನರ ಆಶೋತ್ತರಕ್ಕೆ ತಕ್ಕಂತೆ ಎಲ್ಲ ಸಂಸದರು ಜವಾಬ್ದಾರಿ ನಿಭಾಯಿಸುವ ನಂಬಿಕೆಯಿದೆ ಎಂದಿದ್ದಾರೆ.
11:19 AM, 17 Jun

ಸಂಸತ್ ಕಲಾಪದ ಮೊದಲೆರಡು ದಿನಗಳಲ್ಲಿ 542 ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೇಶದ 22 ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಂಸದರು ಅರ್ಹರಾಗಿರುತ್ತಾರೆ. ಕಲಾಪದ ಮೂರನೇ ದಿನ ನೂತನ ಲೋಕಸಭಾಧ್ಯಕ್ಷ ಹಾಗೂ ಉಪಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಹಂಗಾಮಿ ಸ್ಪೀಕರ್ ವೀರೇಂದ್ರಕುಮಾರ್ ಪ್ರಮಾಣವಚನ ಬೋಧಿಸಲಿದ್ದಾರೆ
11:19 AM, 17 Jun

17ನೇ ಲೋಕಸಭಾ ಅಧಿವೇಶನ ಆರಂಭಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ವೀರೇಂದ್ರ ಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

English summary
Monsoon session 2019 : The first session of the 17th Lok Sabha commenced from today(June 17). BJP MP Virendra Kumar took oath as the Protem Speaker of the 17th Lok Sabha, at Rashtrapati Bhawan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X