ಸಂಸತ್ತಿನ ಮುಂಗಾರು ಅಧಿವೇಶನ: 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆ, ಪಟ್ಟಿ ಇಲ್ಲಿದೆ
ನವದೆಹಲಿ, ಜುಲೈ. 19: ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ.
ಇದರ ನಡುವೆ ಸದ್ಯ ದೇಶದ ಎಲ್ಲರ ಕಣ್ಣುಗಳು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.
ಮುಂಗಾರು ಅಧಿವೇಶನವನ್ನು ಸುಗಮವಾಗಿ ನಡೆಸಲು ಬುಧವಾರ ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, 34 ಪಕ್ಷಗಳು ಮತ್ತು 44 ನಾಯಕರು ಹಾಜರಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಪ್ರಾರಂಭವಾಗಿ ಆಗಸ್ಟ್ 11 ರಂದು ಮುಕ್ತಾಯವಾಗಲಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಚರ್ಚಿಸಬಹುದಾದ 31 ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ:
1. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023
2. ಸಿನಿಮಾಟೋಗ್ರಾಫ್ (ತಿದ್ದುಪಡಿ) ಮಸೂದೆ, 2019
3. ಮಧ್ಯಸ್ಥಿಕೆ ಮಸೂದೆ, 2021
4. ಜೈವಿಕ ವೈವಿಧ್ಯ (ತಿದ್ದುಪಡಿ) ಮಸೂದೆ, 2022
5. ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022
6. ರದ್ದತಿ ಮತ್ತು ತಿದ್ದುಪಡಿ ಮಸೂದೆ, 2022
7. ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ, 2023
8. ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ, 2023
9. ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಮೂರನೇ ತಿದ್ದುಪಡಿ) ಮಸೂದೆ, 2022 (ಹಿಮಾಚಲ ಪ್ರದೇಶ ರಾಜ್ಯಕ್ಕೆ ಸಂಬಂಧಿಸಿದಂತೆ)
10. ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಐದನೇ ತಿದ್ದುಪಡಿ) ಮಸೂದೆ, 2022 (ಛತ್ತೀಸ್‌ಗಢ ರಾಜ್ಯಕ್ಕೆ ಸಂಬಂಧಿಸಿದಂತೆ)
11. ಡಿಎನ್‌ಎ ತಂತ್ರಜ್ಞಾನ (ಬಳಕೆ ಮತ್ತು ಅಪ್ಲಿಕೇಶನ್) ನಿಯಂತ್ರಣ ಮಸೂದೆ, 2019
12. ಅಂಚೆ ಸೇವೆಗಳ ಮಸೂದೆ, 2023
13. ರಾಷ್ಟ್ರೀಯ ಸಹಕಾರ ವಿಶ್ವವಿದ್ಯಾಲಯ ಮಸೂದೆ, 2023
14. ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳು (ತಿದ್ದುಪಡಿ) ಮಸೂದೆ, 2023
15. ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ಬಿಲ್, 2023
16. ಅಂತರಾಷ್ಟ್ರೀಯ ಹಣಕಾಸು ನಿಧಿ ಮತ್ತು ಬ್ಯಾಂಕ್ ಬಿಲ್, 2023
17. ತೆರಿಗೆಗಳ ತಾತ್ಕಾಲಿಕ ಸಂಗ್ರಹ ಮಸೂದೆ, 2023
18. ರಾಷ್ಟ್ರೀಯ ದಂತ ಆಯೋಗದ ಮಸೂದೆ, 2023
19. ರಾಷ್ಟ್ರೀಯ ನರ್ಸಿಂಗ್ ಮತ್ತು ಮಿಡ್‌ವೈಫರಿ ಕಮಿಷನ್ ಬಿಲ್, 2023
20. ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಮಸೂದೆ, 2023
21. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, 2023
22. ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023
23. ಸಿನಿಮಾಟೋಗ್ರಾಫ್ (ತಿದ್ದುಪಡಿ) ಮಸೂದೆ, 2023
24. ನಿಯತಕಾಲಿಕಗಳ ಪತ್ರಿಕಾ ಮತ್ತು ನೋಂದಣಿ ಮಸೂದೆ, 2023
25. ವಕೀಲರ (ತಿದ್ದುಪಡಿ) ಮಸೂದೆ, 2023
26. ಗಣಿ ಮತ್ತು ಖನಿಜ (ಅಭಿವೃದ್ಧಿ )
27. ರೈಲ್ವೆ (ತಿದ್ದುಪಡಿ) ಮಸೂದೆ, 2023
28. ನ್ಯಾಷನಲ್ ರಿಸರ್ಚ್ ಫೌಂಡೇಶನ್ ಬಿಲ್, 2023
29. ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ಆದೇಶ (ತಿದ್ದುಪಡಿ) ಮಸೂದೆ, 2023
30. ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ (ತಿದ್ದುಪಡಿ) ಮಸೂದೆ, 2023
31. ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಪಂಗಡಗಳ ಆದೇಶ (ತಿದ್ದುಪಡಿ) ಮಸೂದೆ, 2023












Click it and Unblock the Notifications