ಸೆಪ್ಟೆಂಬರ್ 14 ರಿಂದ ಸಂಸತ್ ಮುಂಗಾರು ಅಧಿವೇಶನ

ನವದೆಹಲಿ, ಆಗಸ್ಟ್ 31: ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ. ಸೆಪ್ಟೆಂಬರ್ 14 ರಿಂದ ಅಧಿವೇಶನ ನಡೆಸಲು ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ.

Recommended Video

      CSK ತಂಡಕ್ಕೆ ಮತ್ತೊಂದು ಹೊಡೆತ | Oneindia Kannada

      ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಲೇ ಸಂಸತ್ ಮುಂಗಾರು ಅಧಿವೇಶನ ನಡೆಸಲಾಗುತ್ತದೆ. ಆದ್ದರಿಂದ, ಈ ಬಾರಿಯ ಅಧಿವೇಶನ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ.

      ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳು ಒಟ್ಟಿಗೆ ನಡೆಯುವುದಿಲ್ಲ. ಬೆಳಗ್ಗೆ ಲೋಕಸಭೆ ಕಲಾಪ ನಡೆದರೆ, ಮಧ್ಯಾಹ್ನ ರಾಜ್ಯಸಭೆ ಕಲಾಪ ನಡೆಯಲಿದೆ. ಸದಸ್ಯರಿಗೆ ಆಸನ ವ್ಯವಸ್ಥೆ ಕಲ್ಪಿಸಲು ಈ ಮಾದರಿ ಅನುಸರಿಸಲಾಗುತ್ತಿದೆ.

      Monsoon Session Of Parliament From September 14

      ಬೆಳಗ್ಗೆ 9 ಗಂಟೆಯಿಂದ ಲೋಕಸಭೆ ಕಲಾಪ ನಡೆಯಲಿದೆ. ಮಧ್ಯಾಹ್ನದ 3 ಗಂಟೆಯಿಂದ ರಾಜ್ಯಸಭೆ ಕಲಾಪ ನಡೆಯಲಿದೆ. ಸಾಮಾಜಿಕ ಅಂತರ ಕಾಪಾಡುತ್ತಲೇ ಸದಸ್ಯರಿಗೆ ಆಸನ ವ್ಯವಸ್ಥೆ ಕಲ್ಪಿಸಬೇಕಿದೆ.

      ಎಲ್ಲಾ ಸಂಸದರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 14ರಂದು ಅಧಿವೇಶನ ಆರಂಭವಾಗಲಿದ್ದು, ಯಾವುದೇ ವಿರಾಮವಿಲ್ಲದಂತೆ 18 ದಿನ ಕಲಾಪ ನಡೆಯಲಿದೆ.

      ಪ್ರಧಾನಿ, ಸದನದ ನಾಯಕರು, ವಿರೋಧ ಪಕ್ಷದ ನಾಯಕರು, ಸಚಿವರು ತಮ್ಮ ಛೇಂಬರ್‌ನಲ್ಲಿಯೇ ಕುಳಿತು ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಲಾಪ ನೋಡಲು ಸಾಧ್ಯವಾಗುವಂತೆ ದೊಡ್ಡ ದೊಡ್ಡ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+