ಕರ್ನಾಟಕ ಕರಾವಳಿಯಲ್ಲಿ ಮತ್ತೆ ಶುರು ವರುಣನ ಆರ್ಭಟ

ಬೆಂಗಳೂರು, ಆಗಸ್ಟ್ 01: ಒಂದೆರಡು ದಿನಗಳಿಂದ ತಗ್ಗಿದ್ದ ವರುಣನ ಆರ್ಭಟ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಇಂದಿನಿಂದ ಮತ್ತೆ ಹೆಚ್ಚಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಮಳೆಯ ಅಬ್ಬರ ಹೆಚ್ಚಲಿದೆ.

ರಾಜಧಾನಿ ಬೆಂಗಳೂರಿನಲ್ಲಿಎಂದಿನಂತೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

Monsoon Update Aug 1: Heavy rain in coastaland south interior Karnataka

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಕೊಂಚ ಮಳೆಯಾಗಲಿದೆ.

ಇನ್ನುಳಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಅಂದರೆ, ಉತ್ತರಾಖಂಡ್, ಉತ್ತರ ಪ್ರದೇಶ, ಹರ್ಯಾಣ, ಚಂಡಿಗಢ, ದೆಹಲಿ, ಹಿಮಾಚಲ ಪ್ರದೇಶ, ಅರುಣಾವಲ ಪ್ರದೇಶ, ಪೂರ್ವ ರಾಜಸ್ತಾನ, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು, ಪ್ರವಾಹ ಭೀತಿ ಎದುರಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+