ಭಾರೀ ಮಳೆಗೆ ಸಾಕ್ಷಿಯಾಗಲಿವೆ ಅಸ್ಸಾಂ ಮತ್ತು ಮೇಘಾಲಯ

ಬೆಂಗಳೂರು, ಜೂನ್ 15: ಈಶಾನ್ಯ ರಾಜ್ಯಗಳಾದ ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ಮಾರುತಗಳು ಮುಂಬೈನ ಥಾಣೆ, ಅಹ್ಮದ್ ನಗರ, ಬುಲ್ಧಾನಾ, ಅಮ್ರೋಟಿ, ಗೋಂಡಿಯಾ, ಟಿಟ್ಲಾ ಗರ್, ಕಟಕ್, ಮಿಡ್ನಾಪುರ, ಗೋಲ್ ಪಾರಾ ಮತ್ತು ಬಗ್ಡೋಗ್ರಾ ಮೂಲಕ ಹಾದುಹೋಗಿವೆ. ಮುಂಗಾರು ಮಾರುತಗಳು ಮುಂದಿನ ಒಂದು ವಾರ ದುರ್ಬಲವಾಗಲಿದ್ದು, ಹೆಚ್ಚಿನ ಮಳೆ ಸುರಿಯಲಿಕ್ಕಿಲ್ಲ ಎಂದು ಅಂದಾಜಿಸಲಾಗಿದೆ.

Monsoon update: Extremely heavy rain alert for Assam and Meghalaya

ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ತಮಿಳುನಾಡಿನ ಒಳನಾಡು ಮತ್ತು ಉತ್ತರ ಪ್ರದೇಶದ ಪೂರ್ವಭಾಗ, ಬಿಹಾರಗಳಲ್ಲಿ ಚಂಡಮಾರುತ ಸಹಿತ ಮಳೆಯಾಗಲಿದೆ.

ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ಕೇರಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಭಾರೀ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ದಕ್ಷಿಣ ಕೊಂಕಣ್ ಮತ್ತು ಗೋವಾದಲ್ಲಿ ಸಾಧಾರಣ ಮಳೆಯಾಗಲಿದೆ.

Monsoon update: Extremely heavy rain alert for Assam and Meghalaya

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡದು ಹಾಗೆಯೇ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂಮದು ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ, ಕೇರಳ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ತ್ರಿಪುರಗಳಲ್ಲೂ ಮಳೆ ಕಾಣಿಸಿಕೊಳ್ಳಲಿದೆ.

ಈಗಾಗಲೇ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶಗಳಿಗೆ ಅಪ್ಪಳಿಸಿರುವ ಮುಂಗಾರು ಮಹಾರಾಷ್ಟ್ರದ ಮೂಲಕ ಭಾರತದ ಉತ್ತರ ಭಾಗವನ್ನು ತಲುಪಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+