ಕರ್ನಾಟಕ ಕರಾವಳಿಯಲ್ಲಿ ಮಳೆ, ಬೆಂಗಳೂರಿನಲ್ಲಿ ಈಗಲೇ ಸೆಕೆ!
Recommended Video

ಕರ್ನಾಟಕ ಕರಾವಳಿಯಲ್ಲಿ ಮಳೆ, ಬೆಂಗಳೂರಿನಲ್ಲಿ ಈಗಲೇ ಸೆಕೆ! | Oneindia Kannada
ಬೆಂಗಳೂರು, ಜುಲೈ 05: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತೆ ಳೆ ಮುಮದುವರಿಯಲಿದ್ದು, ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿದೆ.
ಆದರೆ ರಾಜಧಾನಿ ಬೆಂಗಳೂರಿನಲ್ಲಿ ಈಗಲೇ ಸೆಕೆ ಆರಂಭವಾಗಿದ್ದು, ಮಳೆಯ ವಿಳಾಸವೇ ಪತ್ತೆಯಿಲ್ಲ. ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿದ್ದರೂ, ಸಂಜೆಯ ಹೊತ್ತಿಗಾದರೂ ಮಳೆ ಬಂದೀತು ಎಂದುಕೊಂಡರೆ ಮಳೆ ಮಾತ್ರ ಬರುತ್ತಿಲ್ಲ.
ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ. ಗೋವಾ ಮತ್ತು ಕೇರಳಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಮಧ್ಯಪ್ರದೇಶ, ವಿದರ್ಭ, ಛತ್ತೀಸಗಢ, ತೇಲಂಗಾಣಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ.
ಜುಲೈ 6 ರಿಂದ 8ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂಬ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.












Click it and Unblock the Notifications