ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
Recommended Video

Monsoon 2018 : ಕರಾವಳಿ ಕರ್ನಾಟಕ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ | Oneindia Kannada
ಬೆಂಗಳೂರು, ಜುಲೈ 09: ಕರ್ನಾಟಕದ ಕರಾವಳಿಯಲ್ಲಿ ಎಂದಿನಂತೆ ಮಳೆ ಮುಂದುವರಿಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.9) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರುಗಳಲ್ಲಿ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಮಳೆಯಾಗಲಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಮಳೆ ಮಾರುತಗಳು ಚುರುಕಾಗಿರುವುದರಿಂದ ದೇಶದ ಎಲ್ಲೆಡೆಯೂ ಕೊಂಚ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications