ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮುಂದುವರಿಯಲಿದೆ ಮಳೆಯ ಆರ್ಭಟ
Recommended Video

ಬೆಂಗಳೂರು, ಜುಲೈ 13: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಹ ಭಾರೀ ಮಳೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಕೊಡಗು ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದು ಸಹ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನಗಳಲ್ಲಿ, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡದ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಮಳೆಯೂ ಕಾಣಸಿಕೊಳ್ಳಲಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.












Click it and Unblock the Notifications