ಕರಾವಳಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ
Recommended Video

ಬೆಂಗಳೂರು, ಜುಲೈ 16: ಕರ್ನಾಟಕದ ಕರಾವಳಿ ಮತ್ತು ರಾಜ್ಯದ ದಕ್ಷಿಣ ಭಾಗದಲ್ಲಿ ಇಂದು(ಜು.16) ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ಕರಾವಳಿ ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಂತೆಯೇ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಹಾರಾಷ್ಟ್ರದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.












Click it and Unblock the Notifications