ಕರ್ನಾಟಕ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಸಂಭವ
Recommended Video

ಬೆಂಗಳೂರು, ಜುಲೈ 10: ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ(ಜು.10) ಮುಂದುವರಿಯಲಿದೆ. ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಕಂಡುಬರಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದೆ.
ಜುಲೈ ತಿಂಗಳನಂತರ ಮುಂಗಾರು ಮಾರುತಗಳು ಮತ್ತಷ್ಟು ಚುರುಕಾಗರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರುಗಳಲ್ಲಿ ಇಂದು ಸಹ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನುಳಿದಂತೆ ಮಧ್ಯ ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.












Click it and Unblock the Notifications