ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ
Recommended Video

ಬೆಂಗಳೂರು, ಜುಲೈ 12: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರುವ ಮಳೆ ಇಂದೂ(ಜು.12) ಮುಂದುವರಿದಿದ್ದು, ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಳಿಗೆ(ಸಾಗರ, ಹೊಸನಗರ, ತೀರ್ಥಹಳ್ಳಿ) ಮತ್ತು ಕೊಡುಗು ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕ ಕರಾವಳಿಯಲ್ಲೂ ಇಂದು ಸಹ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಹಾಸನಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಉಳಿದಂತೆ ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡದ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಮಳೆಯೂ ಕಾಣಸಿಕೊಳ್ಳಲಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.












Click it and Unblock the Notifications