ಕರ್ನಾಟಕ ಕರಾವಳಿಯಲ್ಲಿ ಮತ್ತೆ ಸುರಿಯಲಿದೆ ಧಾರಾಕಾರ ಮಳೆ
Recommended Video

ಬೆಂಗಳೂರು, ಜುಲೈ 11: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡಪಿ ಜೆಲ್ಲೆಗಳಲ್ಲಿ ಮಳೆಯ ಆರ್ಭಟ ಇಂದೂ(ಜು.11) ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡದ ಕವಿದ ವಾತಾವರಣ ಕಂಡುಬರಲಿದ್ದು, ನಿನ್ನೆಯಂತೆಯೇ ಇಂದೂ ಕೊಂಚ ಕೊಂಚ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.
ಮುಂಬೈಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಇಂದೂ ಮುಂದುವರಿಯಲಿದ್ದು, ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications