ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕೆ ಕೊಂಚ ಬಿಡುವು?

Recommended Video

      Monsoon Updates 2018 : ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕೆ ಇಂದು ಕೊಂಚ ಬಿಡುವು | Oneindia Kannada

      ಬೆಂಗಳೂರು, ಜುಲೈ 19: ಕರ್ನಾಟಕದ ಕರಾವಳಿಯಲ್ಲಿ ಹಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಕೊಂಚ ಬಿಡುವು ಪಡೆಯಲಿದೆಯಾ? ಹವಾಮಾನ ಇಲಾಖೆಯ ವರದಿಯ ಪ್ರಕಾರ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಲಿದೆ. ಇಂದು ಸಹ ಮಳೆ ಸುರಿಯುತ್ತದಾದರೂ ಮಳೆಯ ರಭಸ ಕೊಂಚ ಕಡಿಮೆಯಾಗುತ್ತದೆಂದು ಹವಾಮಾನ ಇಲಾಖೆ ಹೇಳಿದೆ.

      ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಇಂದು ಸಹ ಮಳೆ ಬೀಳುವ ಸಾಧ್ಯತೆ ಇದೆ.

      ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆಯಾಗಲಿದೆ.

      Monsoon Update July 19: Heavy rain in coastal Karnataka

      ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

      ಇನ್ನುಳಿದಂತೆ ಮಹಾರಾಷ್ಟ್ರದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ಕೇರಳ, ತಮಿಳುನಾಡು, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.

      ರಾಜಸ್ಥಾನ, ಸೌರಾಷ್ಟ್ರ, ನಿಕೋಬಾರ್ ದ್ವೀಪಗಳಲ್ಲೂ ಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+