ಕರ್ನಾಟಕದಲ್ಲಿ ಸ್ವಲ್ಪ ತಗ್ಗಲಿದೆ ಮಳೆಯ ಆರ್ಭಟ
Recommended Video

ಬೆಂಗಳೂರು, ಜುಲೈ 23: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಕೊಂಚ ತಗ್ಗಲಿದೆ.
ಮಳೆ ನಿಲ್ಲುವ ಲಕ್ಷಣವೇನೂ ಇಲ್ಲ. ಆದರೆ ಇಷ್ಟು ದಿನಕ್ಕಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಇಂದು ಸಹ ಮಳೆ ಬೀಳುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆಯಾಗಲಿದೆ.
ಮಹಾರಾಷ್ಟ್ರ ಕೊಂಕಣ ಸೀಮೆ, ಗೋವಾಗಳಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಇನ್ನುಳಿದಂತೆ ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಮಳೆ ಬೀಳಲಿದೆ.
ರಾಜಸ್ಥಾನ, ಸೌರಾಷ್ಟ್ರಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications