ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ

Recommended Video

      ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ | Oneindia Kannada

      ಬೆಂಗಳೂರು, ಜುಲೈ 24: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಸಹ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

      ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ.

      Monsoon Update July 24 Heavy rain in coastal and south interior Karnataka

      ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆಯಾಗಲಿದೆ.

      ಮಹಾರಾಷ್ಟ್ರ, ಕೊಂಕಣ ಸೀಮೆ, ಗೋವಾಗಳಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಇನ್ನುಳಿದಂತೆ ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಮಳೆ ಬೀಳಲಿದೆ.

      ದೆಹಲಿ, ಜಮ್ಮು-ಕಾಶ್ಮೀರ, ರಾಜಸ್ಥಾನ, ಸೌರಾಷ್ಟ್ರಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+