ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕಿಲ್ಲ ವಿರಾಮ

ಬೆಂಗಳೂರು, ಜುಲೈ 25: ಕರ್ನಾಟಕದ ಕರಾವಳಿಯಲ್ಲಿ ಮಳೆ ನಿಲ್ಲುವ ಲಕ್ಷಣಗಳೇ ಕಂಡುಬರುತ್ತಿಲ್ಲ. ಇಂದು(ಜುಲೈ 25) ಸಹ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದೂ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಭಾರೀ ಗಾಳಿಯೊಂದಿಗೆ ಜಿಟಿ ಜಿಟಿ ಮಳೆ ಕಂಡಿಬರಲಿದೆ.

Monsoon Update July 25 Heavy rain in coastal and south interior Karnataka

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆಯಾಗಲಿದೆ.

ಮಹಾರಾಷ್ಟ್ರ, ಕೊಂಕಣ ಸೀಮೆ, ಗೋವಾಗಳಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಇನ್ನುಳಿದಂತೆ ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಮಳೆ ಬೀಳಲಿದೆ.

ದೆಹಲಿ, ಜಮ್ಮು-ಕಾಶ್ಮೀರ, ರಾಜಸ್ಥಾನ, ಸೌರಾಷ್ಟ್ರಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+