ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
Recommended Video

ಬೆಂಗಳೂರು, ಜುಲೈ 02: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಭಾರತಕ್ಕೆ ಹೋಲಿಸಿದರೆ ಉತ್ತರ ಭಾರತದಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬಿಹಾರದಲ್ಲಿ ಧಾರಾಕಾರ ಮಳೆಯಾಗಲಿದ್ದು, ಉತ್ತರ ಪ್ರದೇಶದ ಕೆಲವು ಭಾಗಗಳಲ್ಲೂ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

ಗೋವಾ ಮತ್ತು ಕೇರಳಗಳಲ್ಲೂ ಮಳೆ ಕಂಡುಬರಲಿದ್ದು, ದೇಶದ ಪಶ್ಚಿಮ ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ನಿರಂತರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡ್, ಬಿಹಾರ, ಒಡಿಶಾ ಕರಾವಳಿ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಹ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆ ಬೀಳಲಿದೆ.
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಇಂದು ಸಹ ಭಾರೀ ಮಳೆ ಮುಂದುವರಿಯಲಿದೆ. ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮೇಘಾಲಯಗಳಲ್ಲೂ ಮಳೆಯಾಗಲಿದೆ. ದೇಶದ ಇನ್ನುಳಿದ ಭಾಗಗಳಲ್ಲೂ ಕೊಂಚ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications