ಕರ್ನಾಟಕದದಲ್ಲಿ ಹಲವು ದಿನಗಳ ನಂತರ ಬಿಡುವು ಪಡೆವ ಮಳೆರಾಯ
ಬೆಂಗಳೂರು, ಜುಲೈ 31: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಲೇ ಇದ್ದ ಮಳೆ ಇಂದಿನಿಂದ ಕೊಂಚ ಬಿಡುವು ಪಡೆವ ಲಕ್ಷಣವಿದೆ. ಆದರೆ ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ತಗ್ಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಮಳೆಯ ಅಬ್ಬರ ಕಡಿಮೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿಎಂದಿನಂತೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications