ಕರ್ನಾಟಕದಲ್ಲಿ ತಗ್ಗಿದ ಮಳೆ, ಉತ್ತರ ಭಾರತದಲ್ಲಿ ವರುಣನ ಆರ್ಭಟ
Recommended Video

ಬೆಂಗಳೂರು, ಜುಲೈ 27: ಕರ್ನಾಟಕ ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದ್ದು, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದೂ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದೂ ಮಳೆ ಸುರಿಯಲಿದೆಯಾದರೂ, ಅದರ ಆರ್ಭಟ ಕೊಂಚ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿಎಂದಿನಂತೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಕೊಂಚ ಮಳೆಯಾಗಲಿದೆ.
ದೇಶದ ನಾನಾ ರಾಜ್ಯಗಳಲ್ಲಿ ಅಂದರೆ, ಉತ್ತರಾಖಂಡ್, ಉತ್ತರ ಪ್ರದೇಶ, ಹರ್ಯಾಣ, ಚಂಡಿಗಢ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಪೂರ್ವ ರಾಜಸ್ತಾನ, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications